ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುಲ್ವಾಮಾ ಭೇಟಿಗೂ ಕೆಲವೇ ಗಂಟೆಗೂ ಮುನ್ನ ಇದೇ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು, ನಡೆಯಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಯಲ್ಲಿ ಪರಿಶೀಲನೆ ನಡೆಸುವ ಹಾಗೂ ಈ ಕುರಿತ ಸಭೆ ನಡೆಸುವ ಉದ್ದೇಶದಿಂದ ಅಮಿತ್ ಶಾ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಗೃಹ ಸಚಿವರ ಸಂಚರಿಸುವ ಹೆದ್ದಾರಿಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ.
ಸಚಿವರ ಆಗಮಿಸುವ ಕೆಲವೇ ಗಂಟೆಗಳ ಮುನ್ನ ಈ ಭಾಗದಲ್ಲಿ ಉಗ್ರರು ಗುಂಡಿನ ದಾಳಿಗೆ ಮುಂದಾಗಿದ್ದು, ಭದ್ರತಾ ಪಡೆಗಳು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಇಡೀ ಪ್ರದೇಶದಲ್ಲಿ ಭಾರೀ ಗುಂಡಿನ ಕಾಳಗ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಸತ್ತಿದ್ದು, ಮೂವರು ಅರಣ್ಯದಲ್ಲಿ ಗುಂಡು ಹಾರಿಸುತ್ತಲೇ ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಧರು ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Discussion about this post