ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಚುನಾವಣೆಗೆ #AssemblyElection ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwara ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಯಾವುದೇ ಬಾರೀ ಪ್ರಮಾಣದಲ್ಲಿ ಅಬ್ಬರಿವಲ್ಲದೇ, ಸದ್ದುಗದ್ದಲವಿಲ್ಲದೇ, ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಸರಳವಾಗಿ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ಸಂಗಮೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಕಳೆದ ಮೂರು ಬಾರಿ ಶಾಸಕನಾಗಿ ಸೇವೆ ಮಾಡಲು ಜನತೆ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಅವಧಿಯಲ್ಲಿ ಶಕ್ತಿಮೀರಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಮಹಿಳೆಯರು ಮಕ್ಕಳು, ದೀನ ದಲಿತರು ಸೇರಿದಂತೆ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವಲ್ಲಿ ನಿರಂತರವಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಮುಂದೆಯೂ ಸಹ ಸೇವೆ ಮಾಡಲು ಕ್ಷೇತ್ರದ ಜನತೆ ಅವಕಾಶ ಮಾಡಿಕೊಡಬೇಕು. ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಪಕ್ಷದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post