No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸ ಮರೆಯಲು ಸಾಧ್ಯವಿಲ್ಲ: ಶಾಸಕ ಚನ್ನಬಸಪ್ಪ ಆಕ್ರೋಶ

kalpa News by kalpa News
June 26, 2026
in ಶಿವಮೊಗ್ಗ
0
Shivamogga Govt Over Chandrashekhars Death MLA Chenni
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜೂನ್ 25, 1975 ರ ಮಧ್ಯರಾತ್ರಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ ತುರ್ತು ಪರಿಸ್ಥಿತಿಯು ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಮತ್ತು ನಾಚಿಕೆಗೇಡಿನ ಅಧ್ಯಾಯವಾಗಿದೆ ಎಂದರು.

ಅಂದು ದೇಶದೊಳಗೆ ಯಾವುದೇ ಯುದ್ಧದ ವಾತಾವರಣವಿರಲಿಲ್ಲ ಅಥವಾ ದಂಗೆಗಳೂ ನಡೆದಿರಲಿಲ್ಲ. ಕೇವಲ ನ್ಯಾಯಾಲಯದ ತೀರ್ಪಿನಿಂದ ರದ್ದಾಗಿದ್ದ ತಮ್ಮ ಪ್ರಧಾನಿ ಹುದ್ದೆ ಹಾಗೂ ಅಧಿಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂಬ ಸ್ವಾರ್ಥ ಮತ್ತು ಹತಾಶೆಯಿಂದ ಇಡೀ ದೇಶವನ್ನು ಜೈಲಖಾನೆಯನ್ನಾಗಿ ಪರಿವರ್ತಿಸಲಾಯಿತು,” ಎಂದು ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
JNNCE Shivamoggaಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಇಂದು ದೊಡ್ಡದಾಗಿ ಭಾಷಣ ಬಿಡುವ ಕಾಂಗ್ರೆಸ್ ನಾಯಕರು, ತಮ್ಮ ಪಕ್ಷದ ಆಡಳಿತಾವಧಿಯ ಕರಾಳ ಇತಿಹಾಸವನ್ನು ಒಮ್ಮೆ ತಿರುವಿ ನೋಡಲಿ. ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಪ್ರಮುಖ ಅಂಗಗಳಾದ ಪತ್ರಿಕಾ ಸ್ವಾತಂತ್ರ್ಯ ಮತ್ತು ನ್ಯಾಯಾಂಗದ ಮೇಲೆ ಗದಾಪ್ರಹಾರ ನಡೆಸಿತ್ತು ಎಂದು ಕಿಡಿ ಕಾರಿದರು.

ನಾಗರೀಕರ ಮೂಲಭೂತ ಹಕ್ಕುಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲಾಯಿತು. ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ಅಮಾನವೀಯವಾಗಿ ಜೈಲಿಗೆ ತಳ್ಳಲಾಯಿತು ಎಂದು ತಿಳಿಸಿದ್ದಾರೆ.

Also read: ಮಿತಿಗಳನ್ನು ಧಿಕ್ಕರಿಸುವ ಒಂದು ದಶಕದ ಅನುಭವ: ಹೀರೋ ಮೋಟೋಸ್ಪೋರ್ಟ್ಸ್ ತಂಡ 10 ವರ್ಷಗಳ ಜಾಗತಿಕ ರ್‍ಯಾಲಿ ರೇಸಿಂಗ್ ಶ್ರೇಷ್ಠತೆ ಸಂಭ್ರಮ

“ಕಾಂಗ್ರೆಸ್‍ನ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಲೋಕನಾಯಕ ಜಯಪ್ರಕಾಶ್ ನಾರಾಯಣ್, ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಎಚ್.ಡಿ. ದೇವೇಗೌಡರು ಸೇರಿದಂತೆ ದೇಶದ ದಿಗ್ಗಜ ನಾಯಕರು ಧೀರೋದಾತ್ತವಾಗಿ ಹೋರಾಡಿದರು ಮತ್ತು ಸುದೀರ್ಘ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿದರು ಎಂದರು.

ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ವಿರುದ್ಧ ದೇಶಾದ್ಯಂತ ಜನಾಂದೋಲನ ರೂಪಿಸುವಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿತ್ತು. ಆರ್‍ಎಸ್‍ಎಸ್‍ನ ಸಾವಿರಾರು ನಿಷ್ಠಾವಂತ ಕಾರ್ಯಕರ್ತರು ಭೂಗತರಾಗಿ ಕಾರ್ಯನಿರ್ವಹಿಸುತ್ತಾ, ಕರಾಳ ಆಡಳಿತದ ಸತ್ಯ ಸಂಗತಿಗಳನ್ನು ಜನರಿಗೆ ತಲುಪಿಸಲು ಪತ್ರಿಕೆಗಳನ್ನು ಮುದ್ರಿಸಿ ಹಂಚಿದರು ಮತ್ತು ದೇಶದ ಸ್ವಾತಂತ್ರ್ಯ ಮರುಸ್ಥಾಪನೆಗಾಗಿ ಬೃಹತ್ ಸತ್ಯಾಗ್ರಹಗಳನ್ನು ಸಂಘಟಿಸಿದರು. ದೆಹಲಿಯಿಂದ ಹಿಡಿದು ಹಳ್ಳಿಹಳ್ಳಿಗಳವರೆಗೆ ಅನೇಕ ಸ್ವಯಂಸೇವಕರು ತಮ್ಮ ಮನೆ ಮಠಗಳನ್ನು ತ್ಯಜಿಸಿ, ಪ್ರಾಣದ ಹಂಗು ತೊರೆದು ಲೂಟಿಗೊಳಗಾದ ನಾಗರಿಕರ ಹಕ್ಕುಗಳಿಗಾಗಿ ಹೋರಾಡಿದರು ಎಂದು ಸ್ಮರಿಸಿದ್ದಾರೆ.

PES Public School Shivamogga“ತುರ್ತು ಪರಿಸ್ಥಿತಿಯ ಆ ಕರಾಳ ದಿನಗಳಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕಲು ಆರ್‍ಎಸ್‍ಎಸ್ ಮತ್ತು ದೇಶಭಕ್ತ ನಾಯಕರ ಮೇಲೆ ಅತ್ಯಂತ ಕ್ರೂರ ಹಾಗೂ ಅಮಾನವೀಯ ದೌರ್ಜನ್ಯಗಳನ್ನು ಎಸಗಿತ್ತು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಾನೂನುಬಾಹಿರವಾಗಿ ನಿಷೇಧಿಸಿ, ಪ್ರಮುಖ ಧುರೀಣರನ್ನು ಕಠಿಣವಾದ ‘ಮಿಸಾ’ ಕಾಯ್ದೆಯಡಿ ಯಾವುದೇ ವಿಚಾರಣೆಯಿಲ್ಲದೆ ಕತ್ತಲೆ ಕೋಣೆಗಳಿಗೆ ತಳ್ಳಲಾಯಿತು ಎಂದು ಕಿಡಿ ಕಾರಿದರು.

ಸೆರೆಮನೆಗಳಲ್ಲಿ ನಾಯಕರಿಗೆ ಹಾಗೂ ಸ್ವಯಂಸೇವಕರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ನೀಡದೆ, ಅಸಹನೀಯ ದೈಹಿಕ ಮತ್ತು ಮಾನಸಿಕ ಕಿರುಕುಳಗಳನ್ನು ನೀಡುವ ಮೂಲಕ ಸರ್ಕಾರಿ ಪ್ರಾಯೋಜಿತ ದೌರ್ಜನ್ಯವನ್ನು ನಡೆಸಲಾಯಿತು. ಪೊಲೀಸರ ಅಮಾನವೀಯ ಲಾಠಿ ಪ್ರಹಾರ ಹಾಗೂ ಜೈಲಿನ ಅತಿಯಾದ ಹಿಂಸೆಗಳಿಗೆ ಬಲಿಯಾಗಿ ದೇಶದಾದ್ಯಂತ ನೂರಾರು ದೇಶಭಕ್ತರು ಜೈಲುಗಳ ಒಳಗೇ ವೀರಮರಣವನ್ನಪ್ಪಿ ಬಲಿದಾನವಾದರು ಎಂದರು.

ಕಾಂಗ್ರೆಸ್ ನಡೆಸಿದ ಈ ಸರ್ವಾಧಿಕಾರಿ ದಬ್ಬಾಳಿಕೆಯು ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಎಂದಿಗೂ ಅಳಿಸಲಾಗದ ಕಪ್ಪು ಚುಕೆಯಾಗಿದೆ. ಆ ಸುದೀರ್ಘ ಹೋರಾಟದ ಫಲವಾಗಿ ಅನಿವಾರ್ಯವಾಗಿ ಮಾರ್ಚ್ 21, 1977 ರಂದು ತುರ್ತು ಪರಿಸ್ಥಿತಿಯನ್ನು ಹಿಂತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.

“ಅಂದು ಸಂವಿಧಾನವನ್ನೇ ತಿದ್ದುಪಡಿ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದ ಕಾಂಗ್ರೆಸ್‍ನ ಸರ್ವಾಧಿಕಾರಿ ಪ್ರವೃತ್ತಿಯ ಮನೋಭಾವ 51 ವರ್ಷಗಳ ನಂತರವೂ ಹಾಗೆಯೇ ಉಳಿದಿದೆ, ಕೇವಲ ಅದರ ವಿಧಾನಗಳು ಬದಲಾಗಿವೆಯಷ್ಟೇ. ತಮ್ಮ ಅಧಿಕಾರಕ್ಕೆ ಧಕ್ಕೆ ಬಂದಾಗಲೆಲ್ಲಾ ಸಂವಿಧಾನದ ಮೌಲ್ಯಗಳನ್ನು ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ಗಾಳಿಗೆ ತೂರುವುದು ಕಾಂಗ್ರೆಸ್‍ಗೆ ರಕ್ತಗತವಾಗಿ ಬಂದ ಗುಣವಾಗಿದೆ. ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯಗಳಿಗೆ ಧಕ್ಕೆ ತಂದ ದುಷ್ಟ ಶಕ್ತಿಗಳನ್ನು ಮಣಿಸಿದ ಅಂದಿನ ಹಿರಿಯರ ಹೋರಾಟದ ವೀರಗಾಥೆ ಇಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಿದೆ.
ಪ್ರಜಾಪ್ರಭುತ್ವವನ್ನು ಉಳಿಸಲು ಅಂದು ತಮ್ಮ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಪ್ರತಿಯೊಬ್ಬ ದೇಶಭಕ್ತರನ್ನು ಹಾಗೂ ಸಂಘದ ವೀರ ಸ್ವಯಂಸೇವಕರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ,” ಎಂದು ಶಾಸಕರು ತಿಳಿಸಿದ್ದಾರೆ.

“ಇತಿಹಾಸದ ಕರಾಳ ಪುಟಗಳನ್ನು ಸಾರ್ವಜನಿಕವಾಗಿ ನೆನಪಿಸುವ ಮೂಲಕ, ಪ್ರಜಾಪ್ರಭುತ್ವ ವಿರೋಧಿ ಕಾಂಗ್ರೆಸ್‍ನ ಅಸಲಿ ಮುಖವನ್ನು ಸಾರ್ವಜನಿಕರ ಮುಂದೆ ಅನಾವರಣಗೊಳಿಸುವುದು ಇಂದಿನ ಅಗತ್ಯವಾಗಿದೆ. ಕಾಂಗ್ರೆಸ್‍ನ ಇಂತಹ ಸರ್ವಾಧಿಕಾರಿ ಧೋರಣೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಿತಿಗಳನ್ನು ಧಿಕ್ಕರಿಸುವ ಒಂದು ದಶಕದ ಅನುಭವ: ಹೀರೋ ಮೋಟೋಸ್ಪೋರ್ಟ್ಸ್ ತಂಡ 10 ವರ್ಷಗಳ ಜಾಗತಿಕ ರ್‍ಯಾಲಿ ರೇಸಿಂಗ್ ಶ್ರೇಷ್ಠತೆ ಸಂಭ್ರಮ

Next Post

ಸುರಕ್ಷತಾ ದಿನಾಚರಣೆ: ಕಿರ್ಲೋಸ್ಕರ್ ಆತಿಥ್ಯದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

kalpa News

kalpa News

Next Post
ಸುರಕ್ಷತಾ ದಿನಾಚರಣೆ: ಕಿರ್ಲೋಸ್ಕರ್ ಆತಿಥ್ಯದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಸುರಕ್ಷತಾ ದಿನಾಚರಣೆ: ಕಿರ್ಲೋಸ್ಕರ್ ಆತಿಥ್ಯದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL