ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಕಾಪಾಡುವುದು ಹಾಗೂ ವಿದ್ಯಾರ್ಥಿಗಳ ಉದ್ಯೋಗ ಭವಿಷ್ಯ ಸುರಕ್ಷಿತಗೊಳಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಹೇಳಿದರು.
ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.
ರಾಜ್ಯದಲ್ಲಿ ಹೊಸ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಅನುಮತಿ ನೀಡುತ್ತಿರುವ ಕ್ರಮಕ್ಕೆ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಅನಿಯಂತ್ರಿತವಾಗಿ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಿದರೆ ಶಿಕ್ಷಣದ ಗುಣಮಟ್ಟ ಮತ್ತು ಮೂಲಸೌಕರ್ಯ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
Also read: ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?
ಇದರ ಪರಿಣಾಮವಾಗಿ ಭವಿಷ್ಯದಲ್ಲಿ ಪಶು ವೈದ್ಯಕೀಯ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳು ಕುಂಠಿತಗೊಳ್ಳುವ ಸಾಧ್ಯತೆ ಇದ್ದು, ಈಗಿರುವ ಸರ್ಕಾರಿ ಮಹಾವಿದ್ಯಾಲಯಗಳ ಪ್ರಾಮುಖ್ಯತೆ ಕೂಡ ಕಡಿಮೆಯಾಗಬಹುದು ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದ್ದು, ಅವರು ಸಲ್ಲಿಸಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















