ತುಮಕೂರು: ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಕುಣಿಗಲ್ ಬಳಿ ನಡೆದಿದೆ.

ಅಪಘಾತ ನಡೆದ ತಕ್ಷಣ ಆಘಾತಕ್ಕೊಳಗಾದ ಶಾಸಕ ರವಿ ಅವರು ಸ್ವಲ್ಪ ಹೊತ್ತು ಘಟನಾ ಸ್ಥಳದಲ್ಲಿದ್ದರು ಬಳಿಕ ಬೆಂಗಳೂರಿಗೆ ಬಂದು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಾಸಕರ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಸಿ ಟಿ ರವಿ ವಿರುದ್ಧ ದೂರು ದಾಖಲು
ಕುಣಿಗಲ್ ತಾಲೂಕಿನ ಹೆದ್ದಾರಿಯಲ್ಲಿ ಅಪಘಾತಕ್ಕೆ ಕಾರಣವಾಗಿ ಇಬ್ಬರ ಸಾವಿಗೆ ಕಾರಣರಾದ ಚಿಕ್ಕಮಗಳೂರು ಶಾಸಕ ಸಿ ಟಿ ರವಿ ವಿರುದ್ಧ ತುಮಕೂರು ಜಿಲ್ಲೆಯ ಕುಣಿಗಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ ಸೆಕ್ಷನ್ 279, 337, 304 (ಎ) ಅಡಿಯಲ್ಲಿ ಶಾಸಕ ರವಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.







Discussion about this post