No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಮಹತ್ವದ ಸುಧಾರಣೆಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ | ಡಾ.ಧನಂಜಯ ಸರ್ಜಿ ಮಾಹಿತಿ

kalpa News by kalpa News
January 14, 2026
in ಶಿವಮೊಗ್ಗ
0
ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಪರಿಷತ್ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ತಿಳಿಸಿದರು.

ಈ ಕುರಿತಂತ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಹಲವು ಸಮಸ್ಯೆ ಹಾಗೂ ವಿಚಾರಗಳ ಕುರಿತಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿತ್ತು. ಇವುಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದಿದ್ದಾರೆ.

ಈ ಹಿಂದೆ ರಾಜ್ಯದ ಸಣ್ಣ ಕ್ಲಿನಿಕ್ ಅಥವಾ ಆಸ್ಪತ್ರೆಗಳು ಬಹುಮಹಡಿ ಕಟ್ಟಡದ ಒಂದು ಭಾಗದಲ್ಲಿದ್ದರೂ ಇಡೀ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ ಎನ್.ಒ.ಸಿ ಪಡೆಯುವುದು ಕಡ್ಡಾಯವಾಗಿತ್ತು. ಹಳೆಯ ಅಗ್ನಿಸುರಕ್ಷತಾ ಮಾನದಂಡದ ಪ್ರಕಾರ ಶೇ. 99ಕ್ಕೂ ಹೆಚ್ಚು ಆಸ್ಪತ್ರೆಗಳು ಪರವಾನಗಿ ಪಡೆಯಲು ಸಂಕಷ್ಟ ಎದುರಿಸುತ್ತಿದ್ದವು. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ, PHANA, ಕೂಡ್ಲಿಗಿ ಶಾಸಕರಾದ ಡಾ. ಶ್ರೀನಿವಾಸ್ ಅವರು ಒಡಗೂಡಿ ನಾನು ನಡೆಸಿದ ಹೋರಾಟದ ಫಲವಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವರಾದ ಪರಮೇಶ್ವರ್ ಅವರು ಜಂಟಿ ಸಭೆ ನಡೆಸಿ ನಿಯಮಗಳನ್ನು ಸರಳೀಕರಿಸಿದ್ದಾರೆ ಎಂದರು.ಅದರಂತೆ 20.99 ಮೀಟರ್’ಗಿಂತ ಕಡಿಮೆ ಎತ್ತರವಿರುವ ಆಸ್ಪತ್ರೆಗಳಿಗೆ ಕನಿಷ್ಠ ಅಗ್ನಿ ಸುರಕ್ಷತಾ ಮಾನದಂಡ ನಿಗದಿಪಡಿಸಿ ಜನವರಿ 9, 2026ರಂದು ಆದೇಶ ಹೊರಡಿಸಲಾಗಿದೆ. ವಸತಿ ರಹಿತ 21 ಮೀಟರ್’ಗಿಂತ ಕಡಿಮೆ ಎತ್ತರದ ಸಣ್ಣ ಕ್ಲಿನಿಕ್ ಹಾಗೂ ರಕ್ತನಿಧಿ ಕೇಂದ್ರಗಳು ಇನ್ನು ಮುಂದೆ ಅಗ್ನಿಶಾಮಕ ಇಲಾಖೆಯ ಬದಲು ಆರೋಗ್ಯ ಇಲಾಖೆ ಮಟ್ಟದಲ್ಲೇ ತಪಾಸಣೆಗೊಳಪಡಲಿವೆ ಮತ್ತು ನವೀಕರಣ ಶುಲ್ಕವನ್ನು ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ ಎಂದರು.

ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 8,728 ಆಸ್ಪತ್ರೆಗಳಿವೆ ಇವುಗಳಲ್ಲಿ 329 ಆಸ್ಪತ್ರೆಗಳು ಮಾತ್ರ ಫೈರ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಈ ಕಾನೂನು ತಿದ್ದುಪಡಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ಅನುಕೂಲವಾಗಿಲಿದೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಮಾತನಾಡಿದ ಶಾಸಕರು, ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಅತಿ ಹೆಚ್ಚು ಸೀಟುಗಳನ್ನು ಮೀಸಲಿಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ ಶೇ. 10ರಷ್ಟು ಮಾತ್ರ ಅವಕಾಶ ನೀಡುತ್ತಿರುವುದು ತಾರತಮ್ಯಕ್ಕೆ ಕಾರಣವಾಗಿತ್ತು. ಒಂದು ಖಾಸಗಿ ವಿವಿಯಲ್ಲಿ 4,320 ಇಂಜಿನಿಯರಿಂಗ್ ಸೀಟುಗಳಿದ್ದು ಅದರಲ್ಲಿ 4,100 ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ. ಆದರೆ ರಾಜ್ಯದ ಒಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ 6,495 ಸೀಟುಗಳಿದ್ದರೆ ಅದರಲ್ಲಿ ಕೇವಲ 700 ಸೀಟುಗಳು ಮಾತ್ರ ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ. ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 1,50,000 ಸೀಟುಗಳಿದ್ದರೆ ಅದರಲ್ಲಿ 1 ಲಕ್ಷ ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್ ಗೆ ಇದೆ ಎಂಬ ಆಘಾತಕಾರಿ ವಿಷಯವನ್ನು ಗಮನ ಸೆಳೆಯಲಾಗಿತ್ತು. ಇದರ ಪರಿಣಾಮವಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಒಂದೇ ಕೋರ್ಸಿಗೆ ಅಧಿಕ ಸೀಟು ಪಡೆಯುವುದನ್ನು ನಿರ್ಬಂಧಿಸಲು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಸೌಲಭ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದು ಖಾಸಗಿ ವಿವಿಗಳ ಹಾವಳಿಗೆ ಕಡಿವಾಣ ಹಾಕುವುದಲ್ಲದೆ, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.
ಇನ್ನು, ವಿವಿಧ ಆರೋಗ್ಯ ಯೋಜನೆಗಳಡಿ ನೀಡಲಾಗುವ ಚಿಕಿತ್ಸಾ ದರಗಳ ತಾರತಮ್ಯ ನಿವಾರಣೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನವನ್ನು ಶಾಸಕರು ಶ್ಲಾಘಿಸಿದರು. ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ 2025ರ ಅಕ್ಟೋಬರ್ 13ರಿಂದ ಅನ್ವಯವಾಗುವಂತೆ ದೇಶದಾದ್ಯಂತ ಇಎಏಖ ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ ಎಂದರು.

ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, ಆರೋಗ್ಯ ಭಾಗ್ಯ, ಇಎಸ್’ಐ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲೂ ಈ ಪರಿಷ್ಕೃತ ದರವನ್ನು ಜಾರಿಗೆ ತರಲು ಸರ್ಕಾರಕ್ಕೆ ಒತ್ತಾಯಿಸಿದ್ದೀನಿ. ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಜಾರಿಗೆ ತರುವ ಪ್ರಕ್ರಿಯೆಲ್ಲಿದೆ ಎಂದು ಡಾ.ಧನಂಜಯ ಸರ್ಜಿ ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರ ಬಿಜೆಪಿ ಅಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ.ಬಿ. ಹರಿಕೃಷ್ಣ, ಎಚ್.ಸಿ. ಮಾಲತೇಶ್, ಮುಖಂಡರಾದ ಶಿವರಾಜ್ ಮತ್ತು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Fire DeptFire safety standardsKannada News WebsiteLatest News KannadaPHANAShimogaShivamoggaShivamogga Newsಅಗ್ನಿಶಾಮಕ ಇಲಾಖೆಅಗ್ನಿಸುರಕ್ಷತಾ ಮಾನದಂಡಆರೋಗ್ಯಕ್ಲಿನಿಕ್ಡಾ. ಧನಂಜಯ ಸರ್ಜಿವಿಧಾನ ಪರಿಷತ್ಶಿಕ್ಷಣಶಿವಮೊಗ್ಗ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

Next Post

ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

kalpa News

kalpa News

Next Post
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL