No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

ವಿಧಾನ ಪರಿಷತ್ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ನೆರವು

kalpa News by kalpa News
May 21, 2026
in ಶಿವಮೊಗ್ಗ
1
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ #DrDhananjayaSarji ಅವರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಶಿವಮೊಗ್ಗ #Shivamogga ನಗರದ ಜಯನಗರ ಪೊಲೀಸ್ ಠಾಣೆಗೆ ಮಂಜೂರಾಗಿದ್ದ ನೂತನ ಪೊಲೀಸ್ ಜೀಪನ್ನು #PoliceJeep ಇಂದು ಇಲಾಖೆಗೆ ಹಸ್ತಾಂತರಿಸಲಾಯಿತು.

ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಅವರು ಮತ್ತು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

Also Read>> ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಈ ವಾಹನ ಮಂಜೂರಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ #Police ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನೇ ದಿನೇ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಅಪರಾಧಗಳ ನಿಯಂತ್ರಣ ಹಾಗೂ ಸಾರ್ವಜನಿಕರ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಲು ಪೊಲೀಸರಿಗೆ ಸುಸಜ್ಜಿತ ವಾಹನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ನನ್ನ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಜಮ್ ಪೋರ್ಟಲ್ ಮೂಲಕ 7.2 ಲಕ್ಷದಲ್ಲಿ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪನ್ನು ಒದಗಿಸಿದ್ದೇವೆ ಎಂದರು.

Also Read>> ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಶೇ.22ರಿಂದ ಶೇ.25ರಷ್ಟು ವಾಹನದ ಕೊರತೆ ಇದೆ. ಜಯನಗರ ಪೊಲೀಸ್ ಠಾಣೆ ಇರುವ ಜಾಗಕ್ಕೆ ಒಂದು ಇತಿಹಾಸ ಇದೆ, ಠಾಣೆ ಇರುವ ಜಾಗದಲ್ಲಿ ಜಿಲ್ಲೆಯ ಮೊದಲ ನ್ಯಾಯಾಲಯ ಇತ್ತು. ನಮ್ಮ ಸರ್ಜಿ ಆಸ್ಪತ್ರೆಯ ವತಿಯಿಂದ ನಾವು ಜಿಲ್ಲಾ ಪೊಲೀಸರಿಗೆ ವಾರ್ಷಿಕ ಹೆಲ್ತ್ ಚೆಕ್ ಅಪ್ ಅನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪೊಲೀಸರ ಒತ್ತಡದ ಕೆಲಸ ನಡುವೆ ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಮುಂದಿನ ದಿನಗಳಲ್ಲೂ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ #BNikhil ಮಾತನಾಡಿ, ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ಮೂಲಭೂತ ಸೌಕರ್ಯಗಳ ಸೇರ್ಪಡೆ ಅತ್ಯಗತ್ಯ. ಸಾರ್ವಜನಿಕರ ರಕ್ಷಣೆಗೆ ನಮ್ಮ ಸಿಬ್ಬಂದಿ ಸದಾ ಸಿದ್ಧರಿದ್ದು, ಈ ಹೊಸ ವಾಹನದಿಂದ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದರು.

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

ಜಯನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಡಿಸಿ ಆಫೀಸ್, ನ್ಯಾಯಾಲಯ, ಸರ್ಕಾರಿ ಕಚೇರಿಗಳು ಇರುವುದರಿಂದ ಠಾಣೆಗೆ ವಾಹನ ಅವಶ್ಯಕತೆ ಇತ್ತು. ಇಲಾಖೆಯ ಬೇಡಿಕೆಗೆ ತಕ್ಷಣ ಸ್ಪಂದಿಸಿ ತಮ್ಮ ಅನುದಾನದಲ್ಲಿ ವಾಹನ ಒದಗಿಸಿದ ಡಾ. ಧನಂಜಯ ಸರ್ಜಿ ಅವರಿಗೆ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಧನ್ಯವಾದಗಳು ಎಂದರು.

ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಮಾತನಾಡಿ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿವೈಎಸ್’ಪಿ ಸಂಜೀವ್ ಕುಮಾರ್, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಅನಿಲ್ , ಪ್ರಮುಖರಾದ ಬೇಡರ ಹೊಸಹಳ್ಳಿ ಸಂದೀಪ್, ಗಿರೀಶ್ ಮಲ್ಲಾಪುರ, ಶುಭಕರ್, ಸಂತೆಕಡೂರು ಹರೀಶ್, ರೇಣುಕಾರಾಧ್ಯ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ ರಾವ್ ಕುಲಕರ್ಣಿ, ವೈದ್ಯರಾದ ಡಾ. ವಿಜಯ ಕುಮಾರ ಮಾಯೆರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaMalnad NewsMLAs' Regional Development GrantPolice JeepShimogaShivamoggaShivamogga Newsಎಸ್.ಎನ್. ಚನ್ನಬಸಪ್ಪಡಾ. ಧನಂಜಯ ಸರ್ಜಿಪೊಲೀಸ್ ಜೀಪ್ಪೊಲೀಸ್ ಠಾಣೆವಿಧಾನ ಪರಿಷತ್ ಸದಸ್ಯಶಾಸಕರ ಪ್ರದೇಶಾಭಿವೃದ್ಧಿ ಅನುದಾನಶಿವಮೊಗ್ಗ
Share219Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

Next Post

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

kalpa News

kalpa News

Next Post
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

Comments 1

  1. Pingback: ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL