ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಕೇಂದ್ರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಜೆಪಿ ಹಾಗೂ ಜೆಡಿಎಸ್ ಕಚೇರಿ ಬಳಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು.
ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಸಂಪುಟ ಹಾಗೂ ರಾಜ್ಯ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು, ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು.
ಬಿಜೆಪಿ ಕಚೇರಿಯಲ್ಲಿ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಪ್ರಮುಖರಾದ ಆರ್.ಕೆ. ಸಿದ್ದರಾಮಣ್ಣ, ಗಿರೀಶ್ ಪಟೇಲ್ ಸೇರಿದಂತೆ ಹಲವರು ಮೋದಿಯವರು ಪ್ರಮಾಣ ವಚನದ ಕ್ಷಣಗಳನ್ನು ಟಿವಿಯಲ್ಲಿ ವೀಕ್ಷಿಸಿದರು.

ಇನ್ನು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಜಿಲ್ಲಾ ಜೆಡಿಎಸ್ ಪ್ರಮುಖರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದ್ದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಜಯಘೋಷ ಮೊಳಗಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post