ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಅವಧಿಯ ತನ್ನ ಕೊನೆಯ ಬಜೆಟನ್ನು ಫೆ.1ರಂದೇ ಮಂಡಿಸಲಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜ.31ರಿಂದ ಫೆ.13ರವರೆಗೆ ನಡೆಯಲಿದ್ದು, ಫೆ.1 ರಂದು ಆಯವ್ಯಯ ಮಂಡನೆಯಾಗಲಿದೆ. ಜ.31 ರಂದು ರಾಷ್ಟçಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.
ಚುನಾವಣಾ ಬಜೆಟ್?
ಫೆ.೧ರಂದು ಕೇಂದ್ರ ಸರ್ಕಾರ ಮಂಡನೆ ಮಾಡಲಿರುವ ಆಯವ್ಯಯ ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಸಿದ್ದಪಡಿಸಲಾಗಿದೆ ಎಂದು ವರದಿಯಾಗಿದೆ.
ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿಯಿರುವ ಮುನ್ನ ಅಂದರೆ 2 ತಿಂಗಳ ಮುನ್ನ ಬಜೆಟ್ ಮಂಡನೆ ಮಾಡುತ್ತಿದ್ದು, ಮಧ್ಯಂತರ ಬಜೆಟ್ ಆಗಿ ಮಂಡಿಸಲಾಗುತ್ತಿದೆ.
ಮಾಹಿತಿಗಳ ಅನ್ವಯ, ಈ ಮಧ್ಯಂತರ ಬಜೆಟ್‌ನಲ್ಲಿ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ಆದಾಯ ತೆರಿಗೆ ಮಿತಿ ದ್ವಿಗುಣಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದ್ದು, ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಮಿತಿಯನ್ನು ಸರ್ಕಾರ 5 ಲಕ್ಷ ರೂ. ಗೆ ಅಧಿಕಗೊಳಿಸಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.
ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಸಂಪ್ರದಾಯವು ಮಧ್ಯಂತರ ಬಜೆಟ್ ಅಥವಾ ವೋಟ್ ಬ್ಯಾಂಕ್ ಆಗಿರುತ್ತದೆ. ಚುನಾವಣೆಗಳ ನಂತರ ಹೊಸ ಸರ್ಕಾರದ ಸಂಪೂರ್ಣ ಬಜೆಟ್ ಮಂಡಿಸಲಾಗುತ್ತದೆ. ಅಭ್ಯಾಸದ ಪ್ರಕಾರ, ಒಂದು ಸೀಮಿತ ಅವಧಿಗೆ ಅವಶ್ಯಕ ಸರ್ಕಾರಿ ಖರ್ಚುಗೆ ಮತದಾನದ ಖಾತೆ ಅಥವಾ ಅನುಮೋದನೆಯನ್ನು ಚುನಾವಣಾ ವರ್ಷದಲ್ಲಿ ತೆಗೆದುಕೊಳ್ಳಲಾಗುತ್ತದೆ ಮತ್ತು ಹೊಸ ಸರ್ಕಾರವು ಪೂರ್ಣ ಪ್ರಮಾಣದ ಬಜೆಟ್ ಅನ್ನು ಪ್ರಸ್ತುತಪಡಿಸುತ್ತದೆ.
Discussion about this post