ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ದಾಖಲಿಸಿ, ನರೇಂದ್ರ ಮೋದಿಯವರು ದೇಶದ 16ನೆಯ ಪ್ರಧಾನಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಒಂದು ಲಕ್ಷ ಲಾಡು ಹಂಚಲಾಯಿತು.

ನಗರದ ವಿವಿಧೆಡೆ ಬಿಜೆಪಿ ನಾಯಕರು ಸಿಹಿ ಹಂಚಿದ್ದು, ಎಲ್ಲೆಡೆ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.

ಶಿವಪ್ಪ ನಾಯಕ ವೃತ್ತದಿಂದ ಗಾಂಧಿ ಬಜಾರ್ ಮೂಲಕ ರಾಮಣ್ಣ ಶೆಟ್ಟಿ ಪಾರ್ಕ್’ವರೆಗೆ ಗಾಂಧಿ ಬಜಾರ್, ಹೂವಿನ ಮಾರ್ಕೆಟ್ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಶಾಸಕ ಕೆ.ಎಸ್. ಈಶ್ವರಪ್ಪ, ಮೇಯರ್ ಲತಾ ಗಣೇಶ್, ಉಪ ಮೇಯರ್ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್. ಎನ್. ಚನ್ನಬಸಪ್ಪ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹೃಷಿಕೇಶ್ ಪೈ, ನಗರ ಬಿಜೆಪಿ ಅಧ್ಯಕ್ಷ ಎನ್.ಜೆ. ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಬಿ.ಆರ್. ಮಧುಸೂದನ್ ಮತ್ತು ಎಸ್. ಎಸ್. ಜ್ಯೋತಿಪ್ರಕಾಶ್, ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು, ಜಿಲ್ಲಾ ಬಿಜೆಪಿ ಮುಖಂಡರು ಇನ್ನಿತರ ಪ್ರಮುಖರು ಭಾಗವಹಿಸಿದ್ದರು.

















