ನವದೆಹಲಿ: ದೇಶದಾದ್ಯಂತ ತೀವ್ರ ಸಂಚಲನ ಸೃಷ್ಠಿಸಿರುವ ತ್ರಿವಳಿ ತಲಾಖ್ ಮಸೂದೆಗೆ ತಿದ್ದುಪಡಿ ಮಾಡಲು ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ.
ಪ್ರಕರಣದಲ್ಲಿ ತ್ರಿವಳಿ ತಲಾಖ್ ಅಪರಾಧ ಜಾಮೀನು ರಹಿತವಾಗಿದೆ. ಆದರೂ ಸಹ ಮ್ಯಾಜಿಸ್ಟ್ರೇಟ್ ಅವರಿಂದ ಜಾಮೀನು ಪಡೆಯಲಿ ಅವಕಾಶ ಕಲ್ಪಿಸಲಾಗಿದೆ.
ತ್ರಿವಳಿ ತಲಾಖ್ ಮಸೂದೆಯನ್ನು 2018ರ ಡಿಸೆಂಬರ್‌ನಲ್ಲಿ ಲೋಕಸಭೆ ಅಂಗೀಕರಿಸಿದ್ದು, ಕಾನೂನಾತ್ಮಕವಾಗಿ ಇದನ್ನು ಸಂಪೂರ್ಣವಾಗಿ ತೆಗೆದುಹಾಕಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಸುಪ್ರೀಂ ಕೋರ್ಟ್ ಸಹ ತ್ರಿವಳಿ ತಲಾಖ್ ಅನ್ನು ನಿಷೇಧಿಸಿದೆ.
ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದ್ದು, ರಾಜ್ಯಸಭೆಯಲ್ಲಿ ಅಸ್ತು ಎನ್ನಬೇಕಿದೆ.
Discussion about this post