ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೂಡಬಿದರೆಯಲ್ಲಿರುವ #Moodbidri ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ 7 ಮತ್ತು 8 ರಂದು ಬೃಹತ್ ಉದ್ಯೋಗ ಮೇಳವನ್ನು #JobFair ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಳ್ವಾಸ್ #Alvas ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿರವ ಉದ್ಯೋಗ ಮೇಳ 14ನೇ ಮೇಳವಾಗಿದೆ ಎಂದರು.
ಬ್ಯಾಂಕಿಂಗ್, ಹಣಕಾಸು, ಐಟಿ, ಐಟಿಸಿ, ಮ್ಯಾನುಫ್ಯಾಕ್ಷರಿಂಗ್, ಹೆಲ್ತ್ ಕೇರ್, ಫಾರ್ಮಾ, ಆಟೊಮೊಬೈಲ್ಸ್, ಹಾಸ್ಪಿಟಲಿಟಿ ಸೇರಿದಂತೆ ಪ್ರತಿನಿಧಿಸುವ ಉನ್ನತ ಕಂಪನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದರು.
ಈ ಕಂಪನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ಮ್ಯಾನೇಜ್ ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು.
Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ
200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಹೈದರಾಬಾದ್ ನ ಫ್ಯಾಕ್ಟ್ ಸೆಟ್, ಇಎಕ್ಸ್ಎಲ್ ಸರ್ವಿಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್ ಗಳಾದ ಹೆಚ್.ಡಿ.ಎಫ್.ಸಿ., ಆಕ್ಸಿಸ್, ಐ.ಡಿ.ಎಫ್.ಸಿ., ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್, ಫ್ಲಿಪ್ ಕಾರ್ಟ್, ಇವೈ ಕಂಪನಿ ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದರು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ ಸೈಟ್ www.alvaspragati.com ನಲ್ಲಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಈ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಉಚಿತ ಆನ್ ಲೈನ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9008907716, 9663190590 ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಕೆ.ಆರ್. ನಿತಿನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post