ಕಲ್ಪ ಮೀಡಿಯಾ ಹೌಸ್ | ಮೂಡುಬಿದರೆ |
ಗ್ಯಾಸ್ ಗೀಸರ್’ನಿಂದ #Gas geyser ರಾಸಾಯನಿಕ ಸ್ನಾನದ ಕೋಣೆಯಲ್ಲಿ ತುಂಬಿಕೊಂಡು ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಕೋಟೆ ಬಾಗಿಲಿನ ಶಾರಿಕ್(18) ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊAದರಲ್ಲಿ ಸಂಭವಿಸಿದೆ. ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಾರದಿರುವುದನ್ನು ಗಮನಿಸಿದ ಆತನ ಸಹೋದರ ಹೋಗಿ ಪರಿಶೀಲಿಸಿದಾಗ ಶಾರಿಕ್ ಸಾವನ್ನಪ್ಪಿರುವುದು ಗೊತ್ತಾಗಿದೆ.
Also read: ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ
ಶಾರಿಕ್ ಯಾವಾಗಲೂ ಸ್ನಾನದ ಕೋಣೆಯಲ್ಲಿ ಬಹಳ ಹೊತ್ತು ಕಳೆಯುವುದು ಸಾಮಾನ್ಯವಾಗಿದ್ದ ಕಾರಣ ಘಟನೆಯ ಬಗ್ಗೆ ಮನೆಯವರಿಗೆ ಮೊದಲು ಅರಿವಾಗಲಿಲ್ಲ ಎನ್ನಲಾಗಿದೆ.
ಸ್ನಾನದ ಕೋಣೆ ಬಂದ್ ಆಗಿದ್ದು ಗಾಳಿಯಾಡದ ಸ್ಥಿತಿ ಇದ್ದ ಕಾರಣ ಗೀಸರ್’ನ ರಾಸಾಯನಿಕ ಹರಡಿದಾಗ ಶಾರಿಕ್’ಗೆ ಹೊರಬರಲಾಗಲಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post