ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ವಾಷಿಂಗ್ಟನ್: ಕೋವಿಡ್19 ಮಹಾಮಾರಿಗೆ ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಬಲಿಯಾದವರ ಸಂಖ್ಯೆ 20 ಸಾವಿರದ ಗಡಿ ದಾಟಿದ್ದು, ಇಟಲಿಯಲ್ಲಿನ ಸಾವಿನ ಸಂಖ್ಯೆಯನ್ನು ಇದು ಮೀರಿಸಿರುವುದು ಆತಂಕವನ್ನು ಹೆಚ್ಚಿಸಿದೆ.
ಈ ಕುರಿತಂತೆ ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ಅಂಕಿ ಅಂಶ ಬಿಡುಗಡೆ ಮಾಡಿದ್ದು, ನಿನ್ನೆ ರಾತ್ರಿಯವರೆಗೂ ಅಮೆರಿಕಾದಲ್ಲಿ 20,557 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ, ಸೋಂಕು ಪೀಡಿತರ ಸಂಖ್ಯೆ 5,32,879ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಜಗತ್ತಿನಾದ್ಯಂತ 17,80,312 ಜನರು ಈ ಸೋಂಕಿಗೆ ತುತ್ತಾಗಿದ್ದು 1,08,827 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post