ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ರುದ್ರ ತಾಂಡವ ಆಡಿದ್ದು ಒಂದೇ ದಿನ 50 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಆರೋಗ್ಯ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ 50,122 ಮಂದಿಗೆ ಸೋಂಕು ತಗುಲಿದ್ದು, 346 ಸೋಂಕಿತರು ಬಲಿಯಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 23,106 ಹೊಸ ಸೋಂಕು ದೃಢಪಟ್ಟಿದ್ದು 161 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ 27 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 719, ಬಳ್ಳಾರಿ 927, ಬೆಳಗಾವಿ 920, ಬೆಂಗಳೂರು ಗ್ರಾಮಾಂತರ 1,033, ಬೆಂಗಳೂರು ನಗರ 23,106, ಬೀದರ್ 482, ಚಾಮರಾಜನಗರ 542, ಚಿಕ್ಕಬಳ್ಳಾಪುರ 830, ಚಿಕ್ಕಮಗಳೂರು 1009, ಚಿತ್ರದುರ್ಗ 152, ದಕ್ಷಿಣ ಕನ್ನಡ 1,529, ದಾವಣಗೆರೆ 548, ಧಾರವಾಡ 1030, ಗದಗ 189, ಹಾಸನ 1,604, ಹಾವೇರಿ 224, ಕಲಬುರಗಿ 1,097, ಕೊಡಗು 768, ಕೋಲಾರ 1,115, ಕೊಪ್ಪಳ 182, ಮಂಡ್ಯ 1,621, ಮೈಸೂರು 2,790, ರಾಯಚೂರು 427, ರಾಮನಗರ 475, ಶಿವಮೊಗ್ಗ 702, ತುಮಕೂರು 2,335, ಉಡುಪಿ 1,655, ಉತ್ತರ ಕನ್ನಡ 849, ವಿಜಯಪುರ 513 ಮತ್ತು ಯಾದಗಿರಿಯಲ್ಲಿ 739 ಮಂದಿಗೆ ಸೋಂಕು ದೃಢಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post