ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಯ್ಕೆಯಾಗಿರುವ ಕಟೀಲ್ ಅವರನ್ನು ಇಂತಹ ಮಹತ್ವದ ಹುದ್ದೆಗೆ ನಿಯೋಜಿಸಿರುವುದು ಆಶ್ಚರ್ಯ ಮೂಡಿಸಿದೆ.
ಇನ್ನು, ಕಟೀಲ್ ಅವರ ಈ ನಿಯೋಜನೆ ರಾಜ್ಯ ಬಿಜೆಪಿಯಲ್ಲಿ ಹೊಸ ನೀರು ಬರುವ ಸೂಚನೆ ಎಂದು ಹೇಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಲವು ಮಹತ್ವದ ಜವಾಬ್ದಾರಿಗಳನ್ನು ಯುವಕರ ಹೆಗಲಿಗೆ ಹಾಕುವ ಸಾಧ್ಯತೆಯಿದೆ ಎನ್ನಲಾಗಿದೆ.
Discussion about this post