ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮಹತ್ವದ ಮನವಿ ಸಲ್ಲಿಸಿದ್ದಾರೆ.
ಲೋಕಭವನದಲ್ಲಿ ನಡೆದ ಭೇಟಿಯಲ್ಲಿ, ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜನರಿಗೆ ಸುಲಭ ನ್ಯಾಯ ಪ್ರಾಪ್ತಿಗಾಗಿ ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆ ಅಗತ್ಯವೆಂದು ಸಂಸದರು ಒತ್ತಿ ಹೇಳಿದರು.
Also Read>> ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?
ಶಿವಮೊಗ್ಗವು ಭೌಗೋಳಿಕವಾಗಿ ಅನುಕೂಲಕರವಾಗಿದ್ದು, ಆಡಳಿತ, ಶಿಕ್ಷಣ, ವಾಣಿಜ್ಯ ಹಾಗೂ ಸಾರಿಗೆ ಕ್ಷೇತ್ರಗಳಲ್ಲಿ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿರುವುದನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು.
ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಾದರೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ನ್ಯಾಯಪ್ರಾಪ್ತಿ ಹೆಚ್ಚು ಸುಲಭ, ವೇಗವಾದ ಮತ್ತು ಪರಿಣಾಮಕಾರಿ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಉಪಸ್ಥಿತರಿದ್ದು, ಸಂಸದರ ಬೇಡಿಕೆಗೆ ಬೆಂಬಲ ಸೂಚಿಸಿದರು. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ನಡೆಯುತ್ತಿರುವ ಹೋರಾಟಗಳ ನಡುವೆ ಈ ಭೇಟಿ ವಿಶೇಷ ಮಹತ್ವ ಪಡೆದಿದೆ.
“ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯಾದರೆ ಜನರ ನ್ಯಾಯಪ್ರಾಪ್ತಿಯ ಹಕ್ಕು ಬಲವಾಗುತ್ತದೆ, ದಾವೆದಾರರ ವೆಚ್ಚ ಕಡಿಮೆಯಾಗುತ್ತದೆ ಹಾಗೂ ದೀರ್ಘಕಾಲದ ಬೇಡಿಕೆ ಈಡೇರಲಿದೆ”.
-ಬಿ.ವೈ. ರಾಘವೇಂದ್ರ
ಬೆಂಗಳೂರಿನ ವ್ಯಾಪ್ತಿಯಲ್ಲೇ ಶಿವಮೊಗ್ಗ ಮುಂದುವರಿಯಲಿ
ಶಿವಮೊಗ್ಗದಲ್ಲಿ ಪ್ರತ್ಯೇಕ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ, ಜಿಲ್ಲೆಯನ್ನು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದ ವ್ಯಾಪ್ತಿಯಲ್ಲಿಯೇ ಉಳಿಸಬೇಕು ಎಂದು ಸಂಸದರು ಆಗ್ರಹಿಸಿದರು.
ಬೆಂಗಳೂರು ಜನರಿಗೆ ಸುಲಭವಾಗಿ ತಲುಪಬಹುದಾದ ನ್ಯಾಯ ಕೇಂದ್ರವಾಗಿದ್ದು, ವಕೀಲರು ಹಾಗೂ ಸಾರ್ವಜನಿಕರಿಗೂ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.
ಶಿವಮೊಗ್ಗವನ್ನು ಮಂಗಳೂರು ಪ್ರಸ್ತಾವಿತ ನ್ಯಾಯಪೀಠದ ವ್ಯಾಪ್ತಿಗೆ ಸೇರಿಸುವುದಕ್ಕೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗುತ್ತಿರುವುದನ್ನೂ ಅವರು ರಾಜ್ಯಪಾಲರಿಗೆ ತಿಳಿಸಿದರು. ಮಂಗಳೂರು ಪೀಠಕ್ಕೆ ಜೋಡಿಸಿದರೆ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಿತಾಸಕ್ತಿ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
Also Read>> ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ
“ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯಾದರೆ ಜನರ ನ್ಯಾಯಪ್ರಾಪ್ತಿಯ ಹಕ್ಕು ಬಲವಾಗುತ್ತದೆ, ದಾವೆದಾರರ ವೆಚ್ಚ ಕಡಿಮೆಯಾಗುತ್ತದೆ ಹಾಗೂ ದೀರ್ಘಕಾಲದ ಬೇಡಿಕೆ ಈಡೇರಲಿದೆ” ಎಂದು ಹೇಳಿದ್ದಾರೆ.
ಒಟ್ಟಾರೆ, ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಸಂಬಂಧಿಸಿದ ಹೋರಾಟಕ್ಕೆ ಈ ಬೆಳವಣಿಗೆ ಹೊಸ ಚೈತನ್ಯ ನೀಡಿದ್ದು, ಕಾನೂನು ವಲಯ ಹಾಗೂ ಸಾರ್ವಜನಿಕರ ನಿರೀಕ್ಷೆಯನ್ನು ಮತ್ತಷ್ಟು ಬಲಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















