ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ತಾಳಗುಪ್ಪ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಆಧುನೀಕರಣ ಕಾಮಗಾರಿಗಳ ಪ್ರಗತಿಯನ್ನು ಸಂಸದರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ರೈಲ್ವೆ ಸಂಪರ್ಕವು ಯಾವುದೇ ಪ್ರದೇಶದ ಆರ್ಥಿಕ ಬೆಳವಣಿಗೆ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಜನರ ಸಂಚಾರ ಸೌಲಭ್ಯವನ್ನು ಬಲಪಡಿಸುವ ಪ್ರಮುಖ ಮೂಲಸೌಕರ್ಯವಾಗಿದೆ ಎಂದರು.
Also read: ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ
ತಾಳಗುಪ್ಪ ನಿಲ್ದಾಣದ ಅಭಿವೃದ್ಧಿಯಿಂದ ಮಲೆನಾಡು ಭಾಗದ ಜನರಿಗೆ ಇನ್ನಷ್ಟು ಉತ್ತಮ ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದರು. ಇದರಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಾದ್ಯಂತ ರೈಲ್ವೆ ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 2