ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ರಾಜ್ಯದ ವಿವಿಧ ಪ್ರಮುಖ ನಗರಗಳಿಗೆ ನೂತನ ರೈಲು ಮಾರ್ಗ ನಿರ್ಮಿಸಲು ಆದಷ್ಟು ಶೀಘ್ರ ಸಮೀಕ್ಷಾ ಕಾರ್ಯವನ್ನು ಪೂರ್ಣಗಳಿಸಿ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು, ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಮಾಥುರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಂಸದರು, ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗಗಳ ಸಮೀಕ್ಷಾ ಕಾರ್ಯವನ್ನು ಆದಷ್ಟು ಶೀಘ್ರ ನಡೆಸಿ, ಕಾಮಗಾರಿಯನ್ನು ಆರಂಭಿಸಿ ಎಂದು ಮನವಿ ಮಾಡಿದರು.
ಎಲ್ಲೆಲ್ಲಿಗೆ ಹೊಸ ರೈಲು ಮಾರ್ಗ?
ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ನೂತನ ರೈಲ್ವೆ ಮಾರ್ಗವನ್ನು ಪ್ರಾರಂಭಿಸುವ ಕುರಿತಾಗಿ ಸಮೀಕ್ಷಾ ಕಾರ್ಯವನ್ನು ಆದಷ್ಟು ಶೀಘ್ರ ನಡೆಸಿವಂತೆ ಕೋರಿದ್ದಾರೆ.
ಇನ್ನು, ತಾಳಗುಪ್ಪ-ಸಿದ್ದಾಪುರ-ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ನೂತನ ರೈಲ್ವೆ ಮಾರ್ಗಕ್ಕಾಗಿ, ಭದ್ರಾವತಿಯಿಂದ ಚಿಕ್ಕಜಾಜೂರಿಗೆ ನೂತನ ರೈಲು ಮಾರ್ಗಕ್ಕಾಗಿ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಿ ಎಂದು ಕೋರಿದ್ದಾರೆ.
ಹಾಗೆಯೇ ಪ್ರಮುಖವಾಗಿ, ಮಧ್ಯ ಕರ್ನಾಟಕದಿಂದ ಕರಾವಳಿ ಪ್ರದೇಶಕ್ಕೆ ತಾಳಗುಪ್ಪದಿಂದ ಹೊನ್ನಾವರಕ್ಕೆ ಕೊಂಕಣ ರೈಲ್ವೆ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಸಭೆಯಲ್ಲಿ ರೈಲ್ವೆ ಇಲಾಖೆಯ ಮುಖ್ಯ ಪ್ರಧಾನ ಇಂಜಿನಿಯರ್ ಸಿ.ಎಂ. ಗುಪ್ತಾ, ಮುಖ್ಯ ಕಾರ್ಯಾಚರಣೆ ಅಧಿಕಾರಿ ಪ್ರಶಾಂತ್, ವಿಭಾಗೀಯ ಜನರಲ್ ಮ್ಯಾನೇಜರ್ ಕುಲದೀಪ್ ಹಾಗೂ ಡಿಆರ್’ಸಿ ಸದಸ್ಯ ಪೀರ್ ಪಾಷಾ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























Discussion about this post