ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾವೀರ ವಸತಿ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ ಫೆ.6ರಂದು ಆಯೋಜಿಸಿರುವ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ #TejasviSurya ಪಾಲ್ಗೊಳ್ಳಲಿದ್ದಾರೆ.
ಅಂದು ಸಂಜೆ 6 ಗಂಟೆಗೆ ನಗರದ ನಗರದ ಟಿ. ಸೀನಪ್ಪಶೆಟ್ಟಿ ವೃತ್ತ (ಗೋಪಿ ವೃತ್ತ)ದಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಿಂದೂ ಸಂಗಮ ಆಯೋಜನ ಸಮಿತಿ ಶಿವಮೊಗ್ಗ ನಗರದ ಮಹಾವೀರ ವಸತಿ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ #RSS ಶತಾಬ್ದಿ ವರ್ಷದ ಅಂಗವಾಗಿ ಹಿಂದೂ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಿಕ್ಸೂಚಿ ಭಾಷಣ ಮಾಡುವರು. ಸೊರಬದ ಜಡೆ ಸಂಸ್ಥಾನ ಮಠದ ಡಾ. ಶ್ರೀ ಮಹಾಂತ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಘಚಾಲಕ ಬಿ.ಎ. ರಂಗನಾಥ್ ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಸಂಜೆ 5 ಗಂಟೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಶಿವಪ್ಪನಾಯಕ ವೃತ್ತ ಹಾಗೂ ಜೈಲ್ ವೃತ್ತದಿಂದ ಎರಡು ಕಡೆಯಿಂದ ಆರಂಭಗೊಳ್ಳುವ ಶೋಭಾಯಾತ್ರೆ ಟಿ. ಸೀನಪ್ಪಶೆಟ್ಟಿ ವೃತ್ತ (ಗೋಪಿ ವೃತ್ತ)ದಲ್ಲಿ ಸಮಾಗಮಗೊಳ್ಳಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಹಿಂದೂ ಸಮಾಜದ ಮಾತೆಯರು, ಯುವಕರು, ಗಣ್ಯರೆಲ್ಲರೂ ಭಾಗವಹಿಸಬೇಕೆಂದು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















