ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಎಸ್’ಐಎಲ್ ಅಧ್ಯಕ್ಷ, ಸಾಗರ ಶಾಸಕ ಹರತಾಳು ಹಾಲಪ್ಪ ಕೊರೋನಾ ಮುಕ್ತರಾಗಿ, ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಹಾಲಪ್ಪನವರಿಗೆ ಆಗಸ್ಟ್ 4ರಂದು ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನ ಶಾಸಕರಿಗೆ ಮತ್ತೆ ಪರೀಕ್ಷೆಗೆ ಒಳಪಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆದರೂ ಸಹ, ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲವು ದಿನಗಳ ಕಾಲ ಅವರು ಹೋಂ ಕ್ವಾರಂಟೈನ್’ನಲ್ಲೇ ಇರಲಿದ್ದಾರೆ ಎಂದು ಶಾಸಕರ ಆಪ್ತರು ತಿಳಿಸಿದ್ದಾರೆ.
ಇಂದು ಡಿಸ್ಚಾರ್ಜ್ ಆದ ಹಾಲಪ್ಪನವರನ್ನು ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರು ಆತ್ಮೀಯವಾಗಿ ಕಳುಹಿಸಿಕೊಟ್ಟರು.

ಇದೇ ವೇಳೆ ಮಾತನಾಡಿದ ಹಾಲಪ್ಪನವರು, ಇಷ್ಟು ದಿನಗಳ ಕಾಲ ನನಗೆ ಉತ್ತಮ ಚಿಕಿತ್ಸೆ ನೀಡಿ, ಜಾಗ್ರತೆ ಮಾಡಿ, ನಾನು ಗುಣಮುಖನಾಗಲು ಸಹಾಯ ಮಾಡಿದ್ದೀರಿ ಎಂದು ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸಿದರು. ಅಲ್ಲದೇ, ನಾನು ಆದಷ್ಟು ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿ, ಪ್ರಾರ್ಥಿಸಿದ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
Get In Touch With Us info@kalpa.news Whatsapp: 9481252093
















