ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗ ಜಿಲ್ಲೆಯ ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿಯವರ ಕಲಾ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಭಾರತೀಯ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ.
ಇವರು ಕಲಾವಿದೆಯಾಗಿ ಅನೇಕ ನಾಟಕಗಳು ನೃತ್ಯ ಉಪನ್ಯಾಸಗಳು ಹಾಗೂ ಸಭಾ ಕಾರ್ಯಕ್ರಮಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರಿಗೆ ಅನೇಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಕೂಡ ಲಭಿಸಿದೆ.
ಹೆಸರಾಂತ ನಿರ್ದೇಶಕರಾದ ಓಂ ಸಾಯಿ ಪ್ರಕಾಶ್, ರಾಗಂ, ರಾಜಕುಮಾರ, ನಕ್ಷತ್ರ ನಾಡಿ ದಿನೇಶ್ ಗುರೂಜಿ, ಭದ್ರಾವತಿ ರಾಮಾಚಾರಿ, ಕೌಂಡಿನ್ಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post