ಕಲ್ಪ ಮೀಡಿಯಾ ಹೌಸ್ | ಮುಂಬೈ |
ರಾಮಾಯಣ #Ramayana ನಾಟಕ ಪ್ರದರ್ಶನ ಮಾಡಿದ ಕಾರಣಕ್ಕಾಗಿ 8 ವಿದ್ಯಾರ್ಥಿಗಳಿಗೆ ಒಟ್ಟು 1.02 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಮುಂಬೈ ಐಐಟಿಯಲ್ಲಿ ನಡೆದಿದೆ.
ಮಾರ್ಚ್ 31ರಂದು ಇನ್‌ಸ್ಟಿಟ್ಯೂಟ್ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್’ನಲ್ಲಿ ರಾಹೋವನ’ ಎಂಬ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ್ದರು. ಎಲ್ಲಾ ಎಂಟು ವಿದ್ಯಾರ್ಥಿಗಳ ಮೇಲೆ ಬಾಂಬೆ ಐಐಟಿ ದಂಡ ವಿಧಿಸಿದೆ.
Also read: ನಾಚಿಕೆ, ಮಾನ, ಮರ್ಯಾದೆ ಬಿಟ್ಟ ರಾಜ್ಯ ಸರ್ಕಾರ: ಶಾಸಕ ಚನ್ನಬಸಪ್ಪ ವಾಗ್ದಾಳಿ
ಈ ನಾಟಕವು ನಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ.ಈ ಹಿನ್ನೆಲೆಯಲ್ಲಿ ನಡೆದ ಶಿಸ್ತು ಕ್ರಮ ಸಮಿತಿ ಸಭೆಯಲ್ಲಿ ಐಐಟಿ ಈ ವಿಷಯವನ್ನು ಪ್ರಸ್ತಾಪಿಸಿ ಕ್ರಮಕೈಗೊಂಡಿದ್ದು, ಸಂಸ್ಥೆಯು ನಾಲ್ಕು ವಿದ್ಯಾರ್ಥಿಗಳಿಗೆ 1.20 ಲಕ್ಷ ರೂ. ದಂಡ ವಿಧಿಸಿದೆ.
ಪದವಿಪೂರ್ವ ವಿದ್ಯಾರ್ಥಿಗಳಾದ ಇತರ ನಾಲ್ವರು ವಿದ್ಯಾರ್ಥಿಗಳಿಗೆ 40,000 ರೂ. ದಂಡವನ್ನು ಪಾವತಿಸುವಂತೆ ಹೇಳಲಾಗಿದೆ. ಅಲ್ಲದೇ ಹಾಸ್ಟೆಲ್ ವಸತಿಗಳನ್ನು ಖಾಲಿ ಮಾಡುವಂತೆ ಸಹ ಆದೇಶಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post