ಕಲ್ಪ ಮೀಡಿಯಾ ಹೌಸ್ | ಮುಂಬೈ |
ರನ್ ವೇನಲ್ಲೇ ಕುಳಿತು ಹಲವು ಪ್ರಯಾಣಿಕರು ಊಟ ಮಾಡಿದ ಪ್ರಕರಣದಲ್ಲಿ ಇಂಡಿಗೋ ವಿಮಾನ ಸಂಸ್ಥೆಗೆ Indigo Airlines ಬಿಸಿಎಎಸ್ 1.20 ಕೋಟಿ ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋವಾ-ದೆಹಲಿ ಮಾರ್ಗದ ಇಂಡಿಗೋ ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್ ವೇನಲ್ಲೇ ಕುಳಿತು ಊಟ ಮಾಡಿದ್ದರು. ಇದರ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಬಿಸಿಎಎಸ್ ವೈಮಾನಿಕ ಭದ್ರತಾ ನಿಯಂತ್ರಕ ಸಂಸ್ಥೆಯು ಮುಂಬೈ ವಿಮಾನ ನಿಲ್ದಾಣ ಆಡಳಿತ ಮಂಡಳಿಗೆ 60 ಲಕ್ಷ ರೂ. ದಂಡ ವಿಧಿಸಿತ್ತು.
Also read: ಪ್ರಧಾನಿ ಮೋದಿ ಸಮ್ಮುಖದಲ್ಲಿ ಸಪ್ತಪದಿ ತುಳಿದ ಅದೃಷ್ಟವಂತ ಜೋಡಿ ಯಾರು? ವಿವಾಹ ನಡೆದಿದ್ದೆಲ್ಲಿ?
ಈ ಪ್ರಕರಣದ ಸಂಬಂಧ ಇಂಡಿಗೋ ಹಾಗೂ ಎಂಐಎಎಲ್ ಗಳಿಗೆ ನಿಯಂತ್ರಕ ಸಂಸ್ಥೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿತ್ತು. ಇದೇ ವೇಳೆ ಡಿಜಿಸಿಎ ಎಂಐಎಎಲ್ ಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ 1.20 ಕೋಟಿ ರೂ. ದಂಡ ವಿಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post