ಕಲ್ಪ ಮೀಡಿಯಾ ಹೌಸ್ | ಮುಂಬೈ |
ಪ್ರಾಜೆಕ್ಟ್ ಕೆ ಚಿತ್ರದ ಸಾಹಸದೃಶ್ಯ ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಖುದ್ಧು ಮಾಹಿತಿ ಹಂಚಿಕೊಂಡಿರುವ ಅಮಿತಾಬ್ ಬಚ್ಚನ್, ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಿಂದಾಗಿ ಪಕ್ಕೆಲುಬಿನ ಕಾರ್ಟಿಲೇಜ್ ಮುರಿದಿದೆ. ಹೈದರಾಬಾದ್ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮುಂಬೈನಲ್ಲಿರುವ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
ಚಿಕಿತ್ಸೆ ಬಳಿಕ ಅಮಿತಾಬ್ ಅವರಿಗೆ ಬೆಡ್ ರೆಸ್ಟ್’ಗೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post