ಕಲ್ಪ ಮೀಡಿಯಾ ಹೌಸ್ | ಮುಂಬೈ |
ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ (48) ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದ ವಾರ ನಾಗ್ಪುರ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನವದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ.
ಚಂದ್ರಾಪುರ ಜಿಲ್ಲೆಯಲ್ಲಿ ಬಾಳಾಸಾಹೇಬ್ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿ ತಮ್ಮ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದ ಧನೋಕರ್ 2014 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದಿದ್ದರು. ನಂತರ ಕಾಂಗ್ರೆಸ್ ಪಕ್ಷ ಸೇರಿ ಅದೇ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
Also read: ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ
ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಧರ್ನೋಕರ್ ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಧರ್ನೋಕರ್ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post