ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ಖ್ಯಾತ ನಟ, ಬಿಗ್ ಬಿ ಅಮಿತಾಬ್ ಬಚ್ಚನ್ Amithab Bhachan ಇಂದು ಮುಂಜಾನೆ ಆಸ್ಪತ್ರೆ ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ.
ಇಂದು ಮುಂಜಾನೆಯೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಪರಿಶೀಲಿಸಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Also read: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು | ಏನಾಯಿತು? ಹೇಗಿದ್ದಾರೆ?
ಸಿನಿಮಾ ಶೂಟಿಂಗ್ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಅವರು, ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post