ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ನಟ ಗೋವಿಂದ #Bollywood Actor Govinda ಅವರ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 4:45ರ ಸುಮಾರಿಗೆ ತಮ್ಮ ಮನೆಯಲ್ಲಿ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
Also read: ಡಾ.ನಾ. ಸೋಮೇಶ್ವರ ಅವರಿಗೆ ಪ್ರತಿಷ್ಠಿತ ಪಾಂಚಜನ್ಯ ಪುರಸ್ಕಾರ
ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ.
ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪರವಾನಗಿ ಪಡೆದ ರಿವಾಲ್ವರ್ ಅನ್ನು ಕೇಸ್‌ನಲ್ಲಿ ಇಟ್ಟುಕೊಂಡಿದ್ದರು. ಕೇಸ್‌ನಿಂದ ತಗೆಯುವಾಗ ರಿವಾಲ್ವರ್ ಕೆಳಗೆ ಬಿದ್ದಾಗ ಫೈರ್ ಆಗಿ ಬುಲೆಟ್ ಕಾಲಿಗೆ ತಗುಲಿದೆ. ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ. ಗೋವಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post