ಕಲ್ಪ ಮೀಡಿಯಾ ಹೌಸ್ | ಮುಂಬೈ |
ಏರ್ ಇಂಡಿಯಾ ವಿಮಾನದ #Air India Airplane ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ #Bomb Threat Letter ಪತ್ತೆಯಾದ ಹಿನ್ನೆಲೆ ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ವಿಮಾನ ವಾಪಸ್ಸಾಗಿರುವ ಘಟನೆ ನಡೆದಿದೆ.
Also read: ಬೆಳಗಾವಿ | ತಂದೆಯಿಂದಲೇ ಮಗನ ಹತ್ಯೆ ! ಕಾರಣವೇನು ಗೊತ್ತಾ?
320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, “ವಿಮಾನದಲ್ಲಿ ಬಾಂಬ್ ಇದೆ” ಎಂಬ ಸಂದೇಶವಿರುವ ಪತ್ರವನ್ನು ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಗಮನಿಸಿದ್ದಾರೆ. ನಂತರ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಭದ್ರತಾ ಸಂಸ್ಥೆಗಳು ಕಡ್ಡಾಯ ತಪಾಸಣೆಗೆ ಒಳಪಡಿಸಿದವು ಎಂದು ಸಹಾರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post