ಕಲ್ಪ ಮೀಡಿಯಾ ಹೌಸ್ | ಮುಂಬೈ |
20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ #sexual assault on nursing student ನಡೆಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟçದ ರತ್ನಗಿರಿಯಲ್ಲಿ ನಡೆದಿದೆ.
ಇಲ್ಲಿನ ಚಂಪಕ್ ಮೈದಾನದ ಬಳಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ಭುಗಿಲೆದ್ದಿದೆ.
ಸಂತ್ರಸ್ತೆಗೆ ಅನೇಕ ಗಾಯಗಳಾಗಿದ್ದು, ಇದು ಕ್ರೂರ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರದ ಶಂಕೆಯನ್ನು ಹುಟ್ಟುಹಾಕಿದೆ. ಈ ಘಟನೆಯು ರತ್ನಗಿರಿಯ ಶುಶ್ರೂಷಾ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Also read: ನಟ ದರ್ಶನ್ ಇಂದು ಪೊಲೀಸ್ ವಶಕ್ಕೆ? ನಟೋರಿಯಸ್’ಗಳಿರುವ ಹಿಂಡಲಗಾ ಜೈಲಿಗೆ ಶಿಫ್ಟ್?
ನರ್ಸ್’ಗಳು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.
ಇದನ್ನು ವಿರೋಧಿಸಿ ಆಸ್ಪತ್ರೆಯ ಸಿಬ್ಬಂದಿ, ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು, ರತ್ನಗಿರಿಯ ಹಲವಾರು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದರಿಂದ ಪ್ರತಿಭಟನೆಗಳು ತೀವ್ರಗೊಂಡವು. ಪ್ರತಿಭಟನಾಕಾರರು ಬ್ಯಾನರ್’ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post