ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ #Bollywood Actor Salman Khan ಮತ್ತೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಬೆದರಿಕೆ ಸಂದೇಶ #Death Threat ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ಸೋಮವಾರ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ.

ಈ ಹಿಂದೆಯೂ ಸಲ್ಮಾನ್‌ಗೆ ಹಲವು ಬಾರಿ ಬೆದರಿಕೆಗಳು ಬಂದಿವೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆಗಳು ಬಂದಿವೆ. ಇದರ ಹೊರತಾಗಿಯೂ ನಟ ಸಿನಿಮಾ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post