ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ #Dharmendra ಅವರಿಗೆ ವೆಂಟಿಲೇಟರ್’ನಲ್ಲಿ ಇನ್ನೂ ಚಿಕಿತ್ಸೆ ನಡೆಯುತ್ತಿದ್ದ, ಅವರ ಸಾವಿನ ಸುದ್ದಿ ಸುಳ್ಳು ಎಂದು ಅವರ ಪತ್ನಿ, ನಟಿ ಹೇಮಮಾಲಿನ #Hemamalini ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿರುವ ಅವರು, ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲವು ರಾಷ್ಟ್ರೀಯ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು ವರದಿ ಪ್ರಸಾರ ಮಾಡಿದ್ದವು. ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಈ ವಿಷಯ ಧರ್ಮೇಂದ್ರ ಕುಟುಂಬದವರಿಗೆ ತೀವ್ರ ನೋವುಂಟು ಮಾಡಿದೆ. ವಿಶೇಷವಾಗಿ ನಟಿ, ಸಂಸದೆ ಹೇಮಾಮಾಲಿನಿ ಅವರಂತೂ ಮಾಧ್ಯಮಗಳು ಹಾಗೂ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಿಡಿ ಕಾರಿದ್ದಾರೆ.

ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ಇಂದು ಮುಂಜಾನೆಯಿಂದಲೇ ಹಲವು ರಾಷ್ಟ್ರೀಯ ಮಾಧ್ಯಮಗಳು, ಪ್ರಾದೇಶಿಕ ಮಾಧ್ಯಮಗಳು ಸಹ ಸುದ್ದಿ ಮಾಡಿದ್ದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post