ಕಲ್ಪ ಮೀಡಿಯಾ ಹೌಸ್ | ಮುಂಬೈ |
ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ 6 ಕಾರು, 7 ಬೈಕ್ ಸೇರಿದಂತೆ 14 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ಮುಂಬೈನ ಗಿರ್ಗಾಂವ್‌ನಲ್ಲಿ ನಡೆದಿದೆ.
ಸ್ಥಳೀಯರು ಬೆಂಕಿ ನಂದಿಸುವ ಮೊದಲೇ ಗೋದಾಮಿನ ಹೊರಗೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಪಸರಿಸಿದ್ದ ಪರಿಣಾಮ ಕಾರು, ಬೈಕ್ ಮತ್ತು ಆಟೋ ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಟ್ಯಾಂಕರ್‌ಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















