ಕಲ್ಪ ಮೀಡಿಯಾ ಹೌಸ್ | ಮುಂಬೈ |
ಮಹತ್ವದ ನಿರ್ಧಾರವೊಂದರಲ್ಲಿ ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ.ವರೆಗೂ ಹಣವನ್ನು ವರ್ಗಾವಣೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ #RBI ಅವಕಾಶ ಕಲ್ಪಿಸಿದೆ.
ಈ ಕುರಿತಂತೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ.
ಈವರೆಗೂ ಒಂದು ಬಾರಿಗೆ ಗರಿಷ್ಠ 1 ಲಕ್ಷ ರೂ.ವರೆಗೆ ಮಾತ್ರ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ ಮಿತಿ 5 ಲಕ್ಷ ರೂ.ಗೆ ಏರಿಕೆಯಾಗಿದೆ.
Also read: ಹೊನ್ನಾಳಿ ಚಂದ್ರಶೇಖರ್ ಸೇರಿ ಶಿವಮೊಗ್ಗದ ಇಬ್ಬರಿಗೆ ನಾಟಕ ಅಕಾಡೆಮಿ ಪ್ರಶಸ್ತಿ
ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತ್ ದಾಸ್ ಅವರು, ಯುಪಿಐ #UPI ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ತಿಳಿಸಿದ್ದಾರೆ.
ಆಹಾರ ಹಣದುಬ್ಬರ ಇಳಿಕೆಯಾಗದ ಕಾರಣ ನಿರೀಕ್ಷೆಯಂತೆ ಆರ್’ಬಿಐ ಸತತ ಒಂಬತ್ತನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ರೆಪೋ ದರವನ್ನು ಶೇ.6.5 ರಲ್ಲಿಯೇ ಕಾಯ್ದುಕೊಳ್ಳುವ ನಿರ್ಧಾರ ತೆಗೆದುಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post