ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್’ನಲ್ಲಿ ಮಿಂಚುತ್ತಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಬಹಳಷ್ಟು ಸಮಯ ವಿವಾದಗಳಿಂದಲೇ ಸುದ್ದಿಯಾಗುವರು. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರನ್ನು ಹಾಡಿ ಹೊಗಳುವ ಮೂಲಕ ಸುದ್ದಿಯಾಗಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ರಶ್ಮಿಕಾ, #Rashmika Mandanna ಮುಂಬೈನಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಹಾಗೂ ದೇಶದಲ್ಲಿನ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಭಾರತ ಈಗ ವೇಗವಾಗಿ ಸಾಗುತ್ತಿದ್ದು, ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ದೇಶ ಕಂಡಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ ಎಂದರು.
Also read: ಡಾ.ಧನಂಜಯ ಸರ್ಜಿ ಅವರ ಗೆಲುವು ಶತಸಿದ್ಧ : ವಿಕಾಸ್ ಪುತ್ತೂರ್
ದೇಶದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದಿದ್ದಾರೆ.
ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ತಗುಲುತ್ತಿತ್ತು. ಆದರೆ, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು. ಅಸಾಧ್ಯವಾಗಿರುವುದನ್ನು ಪ್ರಧಾನಿ ಮೋದಿ ಸಾಧಿಸಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post