ಕಲ್ಪ ಮೀಡಿಯಾ ಹೌಸ್ | ಮುಂಬೈ |
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರು, 2027ರ ಏಕದಿನ ವಿಶ್ವಕಪ್’ನಲ್ಲಿ ಭಾರತ ತಂಡ ಆಡುವ ಕೊನೆಯ ಪಂದ್ಯದ ಮೂಲಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ರೋಹಿತ್ ಶರ್ಮಾ ಬಾಲ್ಯದ ಕೋಚ್ ದಿನೇಶ್ ಲಾಡ್ ಮಾತನಾಡಿದ್ದು, ರೋಹಿತ್ ಶರ್ಮಾ ಅವರ ಕನಸು ಏಕದಿನ ವಿಶ್ವಕಪ್ ಗೆಲ್ಲುವುದು. ಹೀಗಾಗಿ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ. 2027ರ ಏಕದಿನ ವಿಶ್ವಕಪ್’ನಲ್ಲಿ ಭಾರತ ತಂಡ ಆಡುವ ಕೊನೆಯ ಪಂದ್ಯದ ಮೂಲಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂದಿದ್ದಾರೆ.

ಇನ್ನು, ಈ ನಡುವೆಯೇ ಆಸೀಸ್ ಪಿಚ್’ನಲ್ಲಿ ರೋಹಿತ್ ಶರ್ಮಾ ಶತಕ ಹಾಗೂ ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಅಡಿಲೇಡ್’ನಲ್ಲಿ 73 ರನ್ ಬಾರಿಸಿದ್ದ ಹಿಟ್’ಮ್ಯಾನ್ ಸಿಡ್ನಿಯಲ್ಲಿ ಅಜೇಯ 121 ರನ್ ಬಾರಿಸಿ ನಿವೃತ್ತಿ ಸುದ್ದಿಗಳಿಗೆ ಪೂರ್ಣ ವಿರಾಮ ಹಾಕಿದ್ದರು.
ರೋಹಿತ್ ಇನ್ನೂ, ಎಷ್ಟು ವರ್ಷ ಆಡಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಈ ಪ್ರಶ್ನೆಗೆ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಉತ್ತರ ನೀಡಿದ್ದಾರೆ. ರೋಹಿತ್ ಶರ್ಮಾ ಸದ್ಯಕ್ಕಂತು ನಿವೃತ್ತಿ ನೀಡುವುದಿಲ್ಲ. ಇನ್ನೂ 2 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಮುಂದುವರೆಯಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post