ಕಲ್ಪ ಮೀಡಿಯಾ ಹೌಸ್ | ಮುಂಬೈ |
ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಒಂದೇ ಒಂದು ಕರೆಯಿಂದಾಗಿ ಚಿನ್ನದ Gold ಬೆಲೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ.
ಹೌದು… ಅಂತಾರಾಷ್ಟ್ರೀಯ ವಿದ್ಯಮಾನದ ಪರಿಣಾಮ ದೇಶದ ಆರ್ಥಿಕ ಹಿತದೃಷ್ಠಿಯಿಂದ ಭಾರತೀಯರಿಗೆ ಒಂದು ವರ್ಷದವರೆಗೆ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕರೆ ನೀಡಿದ್ದಾರೆ.
ಪ್ರಧಾನಿಯವರ ಈ ಒಂದು ಮಾತು ಮಾರುಕಟ್ಟೆಯ ಮೇಲೆ ತಕ್ಷಣದ ಪರಿಣಾಮ ಬೀರಿದೆ. ಪ್ರಧಾನಿಯವರ ಈ ಮಹತ್ವದ ಮನವಿಯ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್’ಚೇಂಜ್’ನಲ್ಲಿ ಚಿನ್ನದ ದರದಲ್ಲಿ ಗಣನೀಯ ಕುಸಿತ ಕಂಡುಬಂದಿದೆ.
ಇಂದು ಬೆಳಗ್ಗೆ 9.40ರ ವೇಳೆಗೆ ಜೂನ್ ತಿಂಗಳ ಚಿನ್ನದ ಫ್ಯೂಚರ್ ಕಾಂಟ್ರಾಕ್ಟ್ 574 ರೂ. (38%) ರೂ. ಇಳಿಕೆಯಾಗಿದೆ. 1,53,669 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಆದರೆ ಬೆಳ್ಳಿಯ ದರ ಏರಿಕೆಯಾಗಿದೆ.
ಜೂನ್ ಫ್ಯೂಚರ್ 698 ರೂ. (26%) ಏರಿಕೆಯಾಗಿದ್ದು 2,65,957 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಈ ದರ ಇಂದು ಸಂಜೆ ಮಾರುಕಟ್ಟೆ ಕೊನೆಯಾಗುವ 3:30ರ ವೇಳೆಗೆ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ನಿನ್ನೆ ಹೇಳಿದ್ದೇನು?
ದೇಶವನ್ನುದ್ದೇಶಿಸಿ ನಿನ್ನೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಬಿಕ್ಕಟ್ಟು ಜಾಗತಿಕ ಆರ್ಥಿಕತೆಯ ಮೇಲೆ ಒತ್ತಡ ಹೇರುತ್ತಿದೆ. ದೇಶದಲ್ಲಿ ಈ ಸವಾಲುಗಳನ್ನು ನಾವು ಸಮರ್ಥವಾಗಿ ಎದುರಿಸಲು ಸಿದ್ದರಾಗಬೇಕು ಎಂದು ಹೇಳಿದ್ದರು.
ಪ್ರಮುಖವಾಗಿ, ಒಂದು ವರ್ಷ ಚಿನ್ನ ಖರೀದಿ ಹಾಗೂ ವಿದೇಶ ಪ್ರವಾಸಗಳನ್ನು ಮುಂದೂಡಿ ಎಂದಿರುವ ಪ್ರಧಾನಿಯವರು, ಸಾಧ್ಯವಾದಷ್ಟು ಪೆಟ್ರೋಲ್, ಡೀಸೆಲ್ ಬಳಕೆಯನ್ನು ಕಡಿಮೆ ಮಾಡಿ. ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಿಸಿ ಎಂದು ಕರೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















