ಕಲ್ಪ ಮೀಡಿಯಾ ಹೌಸ್ | ಮುಂಬೈ |
ಟಾಟಾ ಗ್ರೂಪ್ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ (86) #Ratan Tata ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ಅವರ ನಿಧನದಿಂದಾಗಿ ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ #CM Eknath Shindhe ತಿಳಿಸಿದ್ದಾರೆ.
Also read: ಉತ್ತಮ ಜೀವನಕ್ಕಾಗಿ ದುಶ್ವಟಗಳಿಂದ ಮುಕ್ತವಾಗಿರುವುದು ಬಹಳ ಮುಖ್ಯ: ಶೈಲಾ ಶಮ್ನೂರು
ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಓಅPಂ) ನಲ್ಲಿ ಅಪರಾಹ್ನ 3.30ರವರೆಗೆ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದು, ಅಮಿತ್ ಶಾ ಅವರು ಭಾರತ ಸರ್ಕಾರದ ಪರವಾಗಿ ಟಾಟಾ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post