ಕಲ್ಪ ಮೀಡಿಯಾ ಹೌಸ್ | ಮುಂಬೈ |
ದೇಶ ವಿದೇಶಗಳಲ್ಲಿ ಖ್ಯಾತರಾಗಿರುವ ಸಂಗೀತ ನಿರ್ದೇಶಕ ಎ.ಆರ್. ರೆಹಮನ್ ಮತ್ತು ಪತ್ನಿ ಸಾಯಿರಾ ಬಾನು #A R Rahaman-Saira Banu ಅವರ 29 ವರ್ಷಗಳ ದಾಂಪತ್ನದಲ್ಲಿ ಬಿರುಕು ಮೂಡಿದ್ದು, ಸಂಬAಧಕ್ಕೆ ಅಂತ್ಯ ಹಾಡಿದ್ದಾರೆ.
ಪತ್ನಿ ಸಾಯಿರಾ ಅವರು ಈ ಕುರಿತಂತೆ ವಿಚ್ಛೇದನ ಘೋಷಣೆ ಮಾಡಿಕೊಂಡಿದ್ದು, ಅವರ ವಕೀಲ ವಂದನಾ ಶಾ ಅವರು, ದಂಪತಿಯ ವಿಚ್ಛೇದನ ನಿರ್ಧಾರದ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ.
ಎ.ಆರ್.ರೆಹಮಾನ್ ಅವರು 1995ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.
Also read: ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಎದೆ ಹೊಕ್ಕಿತ್ತು ಮೂರು ಬುಲೆಟ್ | ರಣರೋಚಕ ಕಾರ್ಯಾಚರಣೆ ಹೇಗಿತ್ತು?
ಮದುವೆಯಾದ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ರೆಹಮಾನ್ ಅವರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಹೇಳಿಕೊಂಡಿರುವುದು ಆಶ್ಚರ್ಯ ಮೂಡಿಸಿದೆ.
ಸಾಯಿರಾ ಅವರು ನೋವು ಮತ್ತು ಸಂಕಟದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವಕೀಲರಾದ ವಂದನಾ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post