ಕಲ್ಪ ಮೀಡಿಯಾ ಹೌಸ್ | ಮುಂಬೈ |
ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ #Virat Kohli ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಹೌದು… ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ಸಾಟಿಯಿಲ್ಲದ ಫಿಟ್‌ನೆಸ್ ಮತ್ತು ನಿರಂತರ ಚಾಲನೆಗೆ ಹೆಸರುವಾಸಿಯಾಯಾಗಿದ್ದು, ಮುಂಬರುವ ಇಂಗ್ಲೆಂಡ್ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ #Test Cricket ವಿದಾಯ ಹೇಳಿದ್ದಾರೆ.

ಈ ಆಟಕ್ಕಾಗಿ, ನಾನು ಮೈದಾನವನ್ನು ಹಂಚಿಕೊಂಡ ಜನರಿಗಾಗಿ ಮತ್ತು ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ವ್ಯಕ್ತಿಗಾಗಿ ನಾನು ಕೃತಜ್ಞತೆಯಿಂದ ತುಂಬಿದ ಹೃದಯದಿಂದ ಹೊರಡುತ್ತಿದ್ದೇನೆ. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡಲು ಬಯಸುತ್ತೇನೆ ಎಂದು ಕೊಹ್ಲಿ ಪೋಸ್ಟ್ ಮಾಡಿದ್ದಾರೆ.ಅಂದಹಾಗೆ 2011ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಈವರೆಗೂ 123 ಪಂದ್ಯಗಳನ್ನಾಡಿದ್ದು, 210 ಇನ್ನಿಂಗ್ಸ್ ಗಳಲ್ಲಿ 46.9 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಅಂತೆಯೇ ಅಜೇಯ 254 ರನ್ ಅವರ ವೈಯುಕ್ತಿಕ ಗರಿಷ್ಛ ಸ್ಕೋರ್ ಆಗಿದ್ದು, ಅಂತೆಯೇ 30 ಶತಕ ಮತ್ತು 31 ಅರ್ಧಶತಕಗಳನ್ನು ಗಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post