ಕಲ್ಪ ಮೀಡಿಯಾ ಹೌಸ್ | ಮುಂಬೈ |
ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೆರೆದಿದ್ದವರಲ್ಲಿ ಬಿಸಿಲಿನ ತಾಪಮಾನಕ್ಕೆ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ.
ನವೀ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ವೀಕ್ಷಿಸಲು ಸಾವಿರಾರು ಜನರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಹಾಗೂ ಶೆಡ್’ಗಳ ವ್ಯವಸ್ಥೆಯೂ ಇರಲಿಲ್ಲ. ಈ ವೇಳೆ ಅಲ್ಲಿನ ತಾಪಮಾನ 38 ಡಿಗ್ರಿಗೆ ಏರಿದ್ದು ಘಟನೆಗೆ ಕಾರಣವಾಗಿದೆ.
Also read: ತನ್ನನ್ನು ಹೆತ್ತ ತಾಯಿ, ತಾನು ಹೆತ್ತ ಮಗನನ್ನೇ ಕೊಚ್ಚಿ ಕೊಂದ ವ್ಯಕ್ತಿ: ಕಾರಣವೇನು?
ಅತಿಯಾದ ತಾಪಮಾನದಿಂದ ಅಸ್ವಸ್ಥಗೊಂಡ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ, 50ಕ್ಕೂ ಅಧಿಕ ಮಂದಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದಾರೆ.
ಪರಿಹಾರ ಘೋಷಣೆ
ಇನ್ನು, ಘಟನೆ ವಿಷಯ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡ ರೋಗಿಗಳನ್ನು ಭೇಟಿಯಾಗಿ, ವಿಚಾರಿಸಿದರು.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರವನ್ನು ಅವರು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post