ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೈತ್ರಿಕೂಟದ ಅಬ್ಬರಕ್ಕೆ ಶಿವಸೇನೆಯ ಕೋಟೆ ಛಿದ್ರಗೊಂಡಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ದೊರೆಯುವ ಸಾಧ್ಯತೆಯಿದೆ.
ಒಟ್ಟು, 227 ವಾಡ್’ಗಳ ಪೈಕಿ ಬಿಜೆಪಿ 90, ಶಿಂಧೆ ಶಿವಸೇನೆ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಉದ್ದವ್ ಶಿವಸೇನೆ 64, ಕಾಂಗ್ರೆಸ್ 12, ಎನ್ಸಿಪಿ-ಎಸ್ಪಿ 1, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಯುಬಿಟಿ 59 ಸ್ಥಾನಗಳೊಂದಿಗೆ ಮೈತ್ರಿಕೂಟದಲ್ಲಿ ಮುನ್ನಡೆ ಸಾಧಿಸಿದ್ದರೂ, ಎಂಎನ್’ಎಸ್ 9 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಎನ್ಸಿಪಿ ಎಸ್ಪಿ ಯಾವುದೇ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿಲ್ಲ.
ಅದೇ ರೀತಿ, ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಕೂಡ ಒಂದು ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿಲ್ಲ. ಮುಂಬೈನ 227 ವಾರ್ಡ್’ಗಳಲ್ಲಿ ಶೂನ್ಯ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ, ಆದಾಗ್ಯೂ, ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಮೈತ್ರಿ ಪಾಲುದಾರ ವಂಚಿತ್ ಬಹುಜನ್ ಆಘಾಡಿ, ಇದುವರೆಗೆ ಬಿಎಂಸಿಯಲ್ಲಿ ತನ್ನ ಖಾತೆಯನ್ನು ತೆರೆಯುವಲ್ಲಿ ಯಶಸ್ವಿಯಾಗಿಲ್ಲ.
2020 ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಗೆ ಕೈಕೊಟ್ಟ ಶಿವಸೇನೆ ಕಾಂಗ್ರೆಸ್, ಎನ್ಸಿಪಿ ಜೊತೆ ಸೇರಿ ಮೈತ್ರಿ ಮಾಡಿಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರು ಶಿವಸೇನೆಯನ್ನು ತೊರೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಏಕನಾಥ್ ಶಿಂದೆ ಮುಖ್ಯಮಂತ್ರಿಯಾಗಿದ್ದರು.
ಈ ಮೈತ್ರಿ ನಂತರ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಯಲ್ಲೂ ಅಬ್ಬರಿಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















