ಕಲ್ಪ ಮೀಡಿಯಾ ಹೌಸ್ | ಮುಂಬೈ |
ಲೈವ್ ಸಂಗೀತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಖ್ಯಾತ ಸಿಂಗರ್ ಸೋನು ನಿಗಮ್’ಗೆ #Sonu Nigam ವಿಪರೀತ ಬೆನ್ನು ನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ಸ್ವತಃ ವೀಡಿಯೋ ಮೂಲಕ ಸಂದೇಶ ನೀಡಿರುವ ಸೋನು ನಿಗಮ್, ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ.
Also read: ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ | ಫೆ.5ರಿಂದ ಭದ್ರಾ ಜಲಾಶಯದಿಂದ ನೀರು
ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು ಎಂದಿರುವ ಅವರು, ವಿಡಿಯೋ ಕ್ಯಾಪ್ಶನ್’ನಲ್ಲಿ ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು ಎಂದಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಸರಸ್ವತಿ ತಮ್ಮ ನೆಚ್ಚಿನ ಮಗುವ ಕೈ ಹಿಡಿಯಲೇಬೇಕಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಬೇಗ ಚೇತರಿಸಿಕೊಳ್ಳಿ ಎಂದು ಕಮೆಂಟ್ ಮಾಡಿದ್ದಾರೆ. ನಿಮ್ಮ ನೋವನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಹೇಳಿದ್ದಾರೆ.
ಲೈವ್ ಶೋನಲ್ಲೇ ಬೆನ್ನು ನೋವು ಕಾಣಿಸಿಕೊಂಡರೂ ಅದನ್ನೆ ಲೆಕ್ಕಿಸಿದೇ ಶೋ ಮುಗಿಸಿದ್ದರು. ಆದರೆ ನೋವು ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















