ಕಲ್ಪ ಮೀಡಿಯಾ ಹೌಸ್ | ಮುಂಬೈ |
ಮೂರನೇ ಅಲೆಯಲ್ಲಿ ಸುಮಾರು 80 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ. ಇದರಲ್ಲಿ ಶೇಕಡಾ 1 ರಷ್ಟು ಸಾವು ಸಂಭವಿಸಿದರೂ, ನಾವು 80,000 ಸಾವುಗಳನ್ನು ನೋಡಬಹುದು ಎಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಡಾ. ಪ್ರದೀಪ್ ವ್ಯಾಸ್ ಎಚ್ಚರಿಸಿದ್ದಾರೆ.
ಮೂರನೇ ಅಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತುಂಬಾ ದೊಡ್ಡದಾಗಿದೆ ಎಂದು ಶುಕ್ರವಾರ ತಡರಾತ್ರಿ ಎಲ್ಲಾ ಉನ್ನತ ಸರ್ಕಾರಿ ಮತ್ತು ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ಅವರು ತಿಳಿಸಿದ್ದಾರೆ.
ಮೂರನೇ ಅಲೆಗೆ ಕಾರಣವಾಗುತ್ತಿರುವ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಸೌಮ್ಯವಾಗಿದೆ ಮತ್ತು ಮಾರಣಾಂತಿಕವಲ್ಲ ಎಂಬ ವಿಶ್ಲೆಷಣೆಗಳನ್ನು ಪರಿಗಣಿಸಿ ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ರೋಗನಿರೋಧಕ ಶಕ್ತಿ ಹೊಂದಿರುವವರಿಗೂ ಇದು ಸಮಾನವಾಗಿ ಮಾರಕವಾಗಿದೆ. ಆದ್ದರಿಂದ ದಯವಿಟ್ಟು ಲಸಿಕೆ ವ್ಯಾಪ್ತಿಯನ್ನು ಸುಧಾರಿಸಿ ಮತ್ತು ಜೀವಗಳನ್ನು ಉಳಿಸಿ” ಎಂದು ಡಾ ವ್ಯಾಸ್ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
“
Discussion about this post