No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

kalpa News by kalpa News
June 5, 2026
in Special Articles
1
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮುಂಬೈ |

ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, Zee ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ Zee Short Film Contest ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ.

ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.
ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ ವಿಭಿನ್ನ ಸಂಸ್ಕೃತಿ ಮತ್ತು ಕಥೆಗಳಿಗೆ ಸೂಕ್ತ ಮನ್ನಣೆ ಸಿಗುವಂತೆ ಮಾಡುವುದಾಗಿದೆ.
ಸ್ಪರ್ಧೆಯು ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕರನ್ನೊಳಗೊಂಡ ಜ್ಯೂರಿ ಸಮಿತಿಯು ವಿಜೇತರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಸಮಿತಿಯಲ್ಲಿ ಅನುರಾಗ್ ಕಶ್ಯಪ್ (ಹಿಂದಿ), ರವಿ ಜಾಧವ್ (ಮರಾಠಿ), ನಾಗ್ ಅಶ್ವಿನ್ (ತೆಲುಗು), ಸೃಜಿತ್ ಮುಖರ್ಜಿ (ಬೆಂಗಾಲಿ), ಪಿ. ಸಮುದ್ರಖಣಿ (ತಮಿಳು), ನಮ್ಮ ಹೆಮ್ಮೆಯ ನಿರ್ದೇಶಕ ಹೇಮಂತ್ ರಾವ್ (ಕನ್ನಡ) ಮತ್ತು ಲಿಜೋ ಜೋಸ್ ಪೆಲ್ಲಿಸ್ಸೆರಿ (ಮಲಯಾಳಂ) ಭಾಗಿಯಾಗಿದ್ದಾರೆ.

ಇದರೊಂದಿಗೆ, ಸಮಾರೋಪ ಸಮಾರಂಭದಲ್ಲಿ ವಿಶೇಷ ಕಾರ್ಯಕ್ರಮವಾಗಿ ಖ್ಯಾತ ಪತ್ರಕರ್ತ ರಾಜೀವ್ ಮಸಂದ್ ಅವರ ನೇತೃತ್ವದಲ್ಲಿ ಜ್ಯೂರಿ ಸದಸ್ಯರ ವಿಶೇಷ ಸಂವಾದ ನಡೆಯಲಿದ್ದು, ಕಥೆ ಹೇಳುವ ಶೈಲಿ, ಪ್ರಾದೇಶಿಕ ಸಿನಿಮಾಗಳು ಮತ್ತು ಭಾರತೀಯ ಚಿತ್ರರಂಗದ ಭವಿಷ್ಯದ ಕುರಿತು ಚರ್ಚೆ ನಡೆಯಲಿದೆ.

ಮುಂಬೈನ ಪ್ರಸಿದ್ಧ ಹೋಟೆಲ್‌ನಲ್ಲಿ ನಡೆಯಲಿರುವ ಈ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಮಾಧ್ಯಮ ಮುಖ್ಯಸ್ಥರು,ಹಾಗೂ ಯುವ ನಿರ್ದೇಶಕರು ಒಂದೆಡೆ ಸೇರಲಿದ್ದಾರೆ. ಎಂಟು ಭಾಷಾ ವಿಭಾಗಗಳಲ್ಲಿ ವಿಜೇತರನ್ನು ಘೋಷಿಸಲಾಗುತ್ತಿದ್ದು; ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ, ಅತ್ಯುತ್ತಮ ಕಥೆ, ಅತ್ಯುತ್ತಮ ಸಂಗೀತ, ಅತ್ಯುತ್ತಮ ಹಾಸ್ಯನಟ ಸೇರಿದಂತೆ ಜ್ಯೂರಿಗಳ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.
ಯುವ ಪ್ರತಿಭೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರಗಳ ಪ್ರಸಾರ ಹಕ್ಕುಗಳನ್ನು ಜೀ ಸಂಸ್ಥೆ ಪಡೆಯಲಿದೆ. ಈ ಕಿರುಚಿತ್ರಗಳನ್ನು ZEE5 ಒಟಿಟಿ ವೇದಿಕೆಯಲ್ಲಿ ಸ್ಟ್ರೀಮ್ ಮಾಡುವುದರ ಜೊತೆಗೆ, ಜೀ ಟಿವಿ, ಜೀ ಕನ್ನಡ,ಜೀ ಮರಾಠಿ, ಜೀ ಬಾಂಗ್ಲಾ, ಜೀ ತೆಲುಗು, ಜೀ ತಮಿಳು, ಜೀ ಕೇರಳಂ, ಜೀ ಜೆಸ್ಟ್ ಮತ್ತು ಜಿಂಗ್ ವಾಹಿನಿಗಳಲ್ಲಿಯೂ ಪ್ರಸಾರವಾಗಲಿವೆ. ಯುವ ಕಥೆಗಾರರಿಗೆ ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳೆರಡರಲ್ಲೂ ದೊಡ್ಡ ಮಟ್ಟದ ವೇದಿಕೆಯಾಗಲಿದೆ. ಇದರೊಂದಿಗೆ ಪ್ರತಿ ಭಾಷಾ ವಿಭಾಗದ ಒಬ್ಬ ವಿಜೇತರಿಗೆ ತಲಾ 2,00,000 ರೂಪಾಯಿ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು.

‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ನ ಕುರಿತು ಮಾತನಾಡಿದ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಯೋಗಗಳನ್ನು ಮಾಡಿ, ಸೋಲು ಗೆಲುವುಗಳ ನಡುವೆ ತಮ್ಮ ವಿಭಿನ್ನ ಶೈಲಿಯ ಕಥೆಗಳನ್ನು ಹೇಳಲು ಕಿರುಚಿತ್ರಗಳು ಸಹಕಾರಿಯಾಗಿವೆ. ಈ ಸ್ಪರ್ಧೆಯು ಮುಕ್ತ ಅಭಿವ್ಯಕ್ತಿಗೆ ರಾಷ್ಟ್ರ ಮಟ್ಟದ ವೇದಿಕೆ ಕಲ್ಪಿಸಿದೆ” ಎಂದರು.

ನಿರ್ದೇಶಕ ಹೇಮಂತ್ ರಾವ್ ಮಾತನಾಡಿ, “ಹೊಸ ಪ್ರಯೋಗಗಳನ್ನು ನಾವು ಎಷ್ಟು ಧೈರ್ಯದಿಂದ ಬೆಂಬಲಿಸುತ್ತೇವೆಯೋ, ಅದರ ಮೇಲೆ ಚಿತ್ರರಂಗದ ಭವಿಷ್ಯ ನಿಂತಿದೆ. ಈ ವೇದಿಕೆಯು ಯುವ ನಿರ್ದೇಶಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲದೆ ತಮ್ಮ ಕಥೆಗಳನ್ನು ಹೇಳಲು ಆತ್ಮವಿಶ್ವಾಸ ನೀಡಿದೆ” ಎಂದು ಅಭಿಪ್ರಾಯ ಪಟ್ಟರು.

ನಾಗ್ ಅಶ್ವಿನ್ ಮಾತನಾಡಿ, “ಯಾವುದೇ ಚೌಕಟ್ಟುಗಳಿಗೆ ಸಿಲುಕದ ಹೊಸ ಪ್ರತಿಭೆಗಳು ಅದ್ಭುತ ಆಲೋಚನೆಗಳನ್ನು ಹೊಂದಿರುತ್ತಾರೆ . ಇಂದಿನ ತಂತ್ರಜ್ಞಾನದ ಸುಲಭ ಲಭ್ಯತೆ ಯುವ ಪೀಳಿಗೆಯ ಕಲ್ಪನಾ ಶಕ್ತಿಗೆ ಹೊಸ ಆಯಾಮ ನೀಡಿದೆ” ಎಂದು ಹಂಚಿಕೊಂಡರು.

ರವಿ ಜಾಧವ್ ಮಾತನಾಡಿ,”ಭಾರತೀಯ ಚಿತ್ರರಂಗದ ಅಸಲಿ ಶಕ್ತಿ ಇರುವುದೇ ನಮ್ಮ ಪ್ರಾದೇಶಿಕ ಕಥೆಗಳಲ್ಲಿ. ಇದು ವಿಭಿನ್ನ ಹಿನ್ನೆಲೆಯ ಧ್ವನಿಗಳನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುವ ಅದ್ಭುತ ಪ್ರಯತ್ನ” ಎಂದರು.

ಸೃಜಿತ್ ಮುಖರ್ಜಿ ಮಾತನಾಡಿ, ” ಸಿನಿಮಾಗಳಿಗೆ ಈಗ ಭಾಷೆ ಮತ್ತು ಭೌಗೋಳಿಕ ಗಡಿಗಳಿಲ್ಲ. ಇಂತಹ ವೇದಿಕೆಗಳು ಒಳ್ಳೆ ಕಥೆಗಳಿಗೆ ಉತ್ತಮ ಅವಕಾಶ ನೀಡಿ ಪ್ರೇಕ್ಷಕರನ್ನು ತಲುಪುವಲ್ಲಿ ಸಹಕಾರಿಯಾಗಿವೆ.” ಎಂದರು
ಲಿಜೋ ಜೋಸ್ ಪೆಲ್ಲಿಸ್ಸೆರಿ, “ಭಾರತೀಯ ಸಿನಿಮಾರಂಗ ಸದಾ ಹೊಸತನವನ್ನು ಬಯಸುತ್ತದೆ ಕಥೆ ಹೇಳುವ ಹಳೆಯ ಶೈಲಿಯನ್ನು ಮೀರಿ,ಪ್ರೇಕ್ಷಕರನ್ನು ಬೆರಗುಗೊಳಿಸುವ ಹೊಸ ಧ್ವನಿಗಳಿಗೆ ಅವಕಾಶ ನೀಡುವುದು ಮುಖ್ಯ” ಎಂದು ನುಡಿದರು.

ಪಿ. ಸಮುದ್ರಖಣಿ,”ನೈಜ ಜೀವನದ ಅನುಭವಗಳಿಂದ ಬಂದ ಕಥೆಗಳು ನೇರವಾಗಿ ಪ್ರೇಕ್ಷಕರ ಮನ ಮುಟ್ಟುತ್ತವೆ
ಅಂತಹ ಕಥೆಗಳಿಗೆ ಇಲ್ಲಿ ಮನ್ನಣೆ ಸಿಗುತ್ತಿರುವುದು ಸಂತಸದ ವಿಚಾರ . ಜೀ ಸಂಸ್ಥೆ ಆಯೋಜಿಸುತ್ತಿರುವ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಮಹಾ ಸಮಾರೋಪವು, ಕೇವಲ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರದೆ ದೇಶದ ಸಾಂಸ್ಕೃತಿಕ ವೈವಿದ್ಯತೆ,ಸೃಜನಶೀಲತೆ ಮತ್ತು ಯುವ ಕಥೆಗಾರರನ್ನು ಸಂಭ್ರಮಿಸುವ ವೇದಿಕೆಯಾಗಲಿದೆ..

ದೀಪಕ್ ಶ್ರೀರಾಮುಲು, ಚೀಫ್ ಚಾನೆಲ್ ಆಫೀಸರ್ – ಜೀ ಕನ್ನಡ & ಜೀ 5 ಬ್ಯುಸಿನೆಸ್ ಹೆಡ್ ಅವರು ” ಜೀ ನೆಟ್‌ವರ್ಕ್ ಹೊಸ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ವೇದಿಕೆ ಕಲ್ಪಿಸುತ್ತಾ ಬಂದಿದೆ. ಈ ಹಾದಿಯಲ್ಲಿ ಅನೇಕ ನಿರ್ದೇಶಕರು, ಬರಹಗಾರರು,ನಟರು ಹೀಗೆ ಅನೇಕರ ಕಲಿಕೆಗೆ ಜೀ ಪೂರಕವಾಗಿದೆ. ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಜೀ ರೈಟರ್ಸ್ ರೂಮ್ ಎನ್ನುವ ಹೊಸ ಹೆಜ್ಜೆಯನ್ನು ಇಟ್ಟಿತ್ತು. ಈ ಬಾರಿ ದೇಶದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಬಹುಭಾಷಾ ಕಿರುಚಿತ್ರ ಸ್ಪರ್ಧೆಯನ್ನು ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಆಯೋಜಿಸಲಾಗಿತ್ತು .ಈ ಪ್ರಯತ್ನಕ್ಕೆ ಚಿತ್ರರಂಗದ ಖ್ಯಾತ ನಿರ್ದೇಶಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಹಾಗೇ ಜನರಿಂದ ಕೂಡ ಅತ್ಯುತ್ತಮ ಪ್ರತಿಕ್ರಿಯೆ ಬಂದಿರುವ ಸಂತಸ ನಮಗಿದೆ. ಈ ಸ್ಪರ್ಧೆಯ ಗ್ರಾಂಡ್ ಫಿನಾಲೆ ಜೂನ್ 5 ರಂದು ನಡೆಯಲಿದ್ದು ಈ ವೇದಿಕೆ ಉದಯೋನ್ಮುಖ ಪ್ರತಿಭೆಗಳನ್ನು ಚಿತ್ರರಂಗ, ಮುಖ್ಯ ವಾಹಿನಿ ಹಾಗೂ OTTಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಲಿದೆ.ಇಂಹತ ಸೃಜನಾತ್ಮಕ ಹಾಗೂ ಅರ್ಥ ಪೂರ್ಣ ವೇದಿಕೆಯನ್ನು ಸೃಷ್ಟಿಸುವಲ್ಲಿ ಮಾರ್ಗದರ್ಶನ ನೀಡಿರುವ ರಾಘವೇಂದ್ರ ಹುಣಸೂರು,ಚೀಫ್ ಕಂಟೆಂಟ್ ಆಫೀಸರ್,ಜೀ ಹಾಗೂ ಜೀ ತಂಡಕ್ಕೂ ನನ್ನ ಕೃತಜ್ಞತೆಗಳು ಹಾಗೂ ಎಲ್ಲಾ ಸ್ಪರ್ಧಾರ್ಥಿಗಳಿಗೂ ಶುಭವಾಗಲಿ” ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                         

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMumbaiNews in KannadaNews KannadaZeeZee Short Film Contestಜೀಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್ಮುಂಬೈ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Next Post

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

kalpa News

kalpa News

Next Post
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

Comments 1

  1. Pingback: ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ » kalpa.news

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL