ಕಲ್ಪ ಮೀಡಿಯಾ ಹೌಸ್ | ಮುಂಬೈ |
ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ Vande Bharath ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಸುರೇಖಾ ಯಾದವ್ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Vande Bharat – powered by Nari Shakti.
Smt. Surekha Yadav, the first woman loco pilot of Vande Bharat Express. pic.twitter.com/MqVjpgm4EO
— Ashwini Vaishnaw (@AshwiniVaishnaw) March 13, 2023
ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಪ್ರಶಂಸೆ ವ್ಯಕ್ತಪಡಿಸಿದ್ದು, 450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು.
Also read: ಪುನೀತ್ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಅಮೆಜಾನ್ ಪ್ರೈಂಗೆ ಲಗ್ಗೆ ಇಡಲು ಸಿದ್ಧತೆ
ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post