ಕಲ್ಪ ಮೀಡಿಯಾ ಹೌಸ್ | ಮುಂಬೈ |
ಭಾರತದ ಹೆಮ್ಮೆಯ ಕ್ರಿಕೆಟಿಗ ವಿರಾಟ್ ಕೊಹ್ಲಿ Virat Kohli ಒಂದೇ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಪುಡಿಗಟ್ಟುವ ಮೂಲಕ, ಇಂತಹ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ.
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೆಯ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ವೃತ್ತಿಜೀವನದ 50ನೆಯ ಏಕದಿನ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಲೀಗ್ ಹಂತದಲ್ಲಿ ಕಿವೀಸ್ ಎದುರು ಶತಕ ಸಿಡಿಸುವ ಅವಕಾಶ ಕೈಚೆಲ್ಲಿದ್ದ ಕೊಹ್ಲಿ, ಇದೀಗ ನಾಕೌಟ್ ಹಂತದಲ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಒಟ್ಟಾರೆ 80ನೆಯ ಶತಕವಾಗಿದೆ.
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್’ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆಯಾದರೆ, ಏಕದಿನ ಕ್ರಿಕೆಟ್ ನಲ್ಲಿ 50 ನೆಯ ಶತಕ ದಾಖಲಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿರುವುದು 2 ನೆಯ ದಾಖಲೆಯಾಗಿದೆ. ಸಚಿನ್ ತೆಂಡೂಲ್ಕರ್ Sachin Tendulkar ಏಕದಿನ ಕ್ರಿಕೆಟ್’ನಲ್ಲಿ 49 ಶತಕ ದಾಖಲಿಸಿದ್ದಾರೆ.
2023 ರ ವಿಶ್ವಕಪ್ ನಲ್ಲಿ ಕೊಹ್ಲಿ 673 ರನ್’ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 600+ ರನ್ ಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸö್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ ವಿಶ್ವಕಪ್ ಟೂರ್ನಿಯಲ್ಲಿ, ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
Also read: ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದ ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post