ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ಬಿ. ಆನೆಕೊಪ್ಪ ನೇಮಕಗೊಂಡಿದ್ದಾರೆ.
ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಚ್.ಆರ್ ಹನುಮಂತಪ್ಪ ಬಸವರಾಜ್ ಬಿ. ಆನೆಕೊಪ್ಪರವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ಉಪಾಧ್ಯಕ್ಷ ಶಿವಕುಮಾರ್, ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಅಧ್ಯಕ್ಷ ಮೈಲಾರಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಉಜ್ಜನಿಪುರ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಬಿ. ರವಿಕುಮಾರ್, ಮಾಜಿ ಸದಸ್ಯ ಆನಂದ್, ಮುಖಂಡರಾದ ಚಂದ್ರಣ್ಣ, ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾರದ ಅಪ್ಪಾಜಿ, ಯುವ ಮುಖಂಡ ಎಂ.ಎ ಅಜಿತ್ ಹಾಗು ಪಕ್ಷದ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಬಸವರಾಜ್ ಬಿ. ಆನೇಕೊಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post