ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ಅನ್ಯ ಜಾತಿಯ ಯುವಕ, ಯುವತಿ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ನಡೆಸಲಾಗಿದ್ದ ಮರ್ಯಾದಾ ಹತ್ಯೆ #HonorKilling ಮಾಡಿದ್ದ ಇಬ್ಬರು ಸಹೋದರರಿಗೆ ಮರಣದಂಡನೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಈ ಕುರಿತಂತೆ ಕಲಬುರಗಿ #Kalgurgi ಹೈಕೋರ್ಟ್ ದ್ವಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದ್ದು, ಇಬ್ಬರಿಗೆ ಮರಣದಂಡನೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ನೀಡುವ ಮೂಲಕ ಸಮಾಜಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಮರಣ ದಂಡನೆ #DeathPenalty ಶಿಕ್ಷೆಗೆ ಒಳಗಾದ ಇಬ್ಬರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ #Muddebihala ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್ (28) ಎಂದು ವರದಿಯಾಗಿದೆ.
ಸಾಯಿಬಣ್ಣ ಎನ್ನುವ ದಲಿತ ಯುವಕನ ಜೊತೆ ಬಾನು ಬೇಗಂ ಪ್ರೀತಿಸಿ ಮದುವೆಯಾಗಿದ್ದಳು. ಇದನ್ನು ಸಹಿಸದ ಸಹೋದರರು ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದ ಸಂರ್ಭದಲ್ಲಿ ಆಕೆಗೆ ಬೆಂಕಿ ಹಚ್ಚಿ ಸಜೀವವಾಗಿ ಕೊಂದು ಹಾಕಿದ್ದರು. 2017 ರಲ್ಲಿ ವಿಜಯಪುರದಲ್ಲಿ ನಡೆದ ಕೊಲೆ ಪ್ರಕರಣ ನಡೆದಿತ್ತು.
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಅಣ್ಣ ತಮ್ಮಂದಿರಿಬ್ಬರು ತಮ್ಮ ತಂಗಿಯನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದರು.
ಈ ಮೊದಲು ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನೆ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post