ಕಲ್ಪ ಮೀಡಿಯಾ ಹೌಸ್
ಮುಜಾಫರ್ ನಗರ: ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕಾಗಿ ಕೈಹಿಡಿದ ಪತ್ನಿಯನ್ನೇ ಪತಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಘಟನೆ ನಡೆದಿದ್ದು, ತನ್ನ ಪತ್ನಿಯನ್ನು ಹತ್ಯೆ ಮಾಡಿದ ಪತಿ, ತನ್ನ ಮೂವರು ಮಕ್ಕಳನ್ನು ನಾಲೆಗೆ ಎಸೆದು ಪರಾರಿಯಾಗಿದ್ದಾನೆ.

ತಲೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ಈತ ನಾಲೆಗೆ ಎಸೆದ ಮಕ್ಕಳ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















